ತುಲನಾತ್ಮಕ ಆನ್ವಯಿಕ ವಿಮರ್ಶೆ ಕುರಿತ ಮೇರುಕೃತಿ-ಪೂರ್ವಸೂರಿಗಳೊಡನೆ. ಈ ಕೃತಿಯು ಸಾಹಿತ್ಯ ವಿಮರ್ಶೆಯ ಕ್ಷೇತ್ರದಲ್ಲಿ ವಿಶಿಷ್ಟ ಕೊಡುಗೆಯಾಗಿದೆ. ಸೀತಾಪರಿತ್ಯಾಗದ ಕಥೆ ಬರುವುದು ಶ್ರೀಮದ್ರಾಮಾಯಣದ ಉತ್ತರಕಾಂಡದಲ್ಲಿ. ಈ ಪ್ರಸಂಗದ ವಿವರಗಳನ್ನು ಪರಿಶೀಲಿಸಿ ಅದರಿಂದ ಏಳುವ ನ್ಯಾಯ-ಅನ್ಯಾಯಗಳನ್ನು ವಿಶ್ಲೇಷಣೆಗೆ ಒಳಪಡಿಸಿದ್ದಾರೆ ಲೇಖಕ ಎ.ಎನ್. ಮೂರ್ತಿರಾವ್.
ಲಲಿತ ಪ್ರಬಂಧ ಪ್ರಕಾರಕ್ಕೆ ವಿಶೇಷ ಕೊಡುಗೆ ನೀಡಿದ್ದ ಅಕ್ಕಿ ಹೆಬ್ಬಾಳು ನರಸಿಂಹಮೂರ್ತಿರಾವ್ ವಿಮರ್ಶಕರೂ ಆಗಿದ್ದರು. ವೈಚಾರಿಕ ಗ್ರಂಥ ‘ದೇವರು’ ಮೂಲಕ ಜನಪ್ರಿಯರಾದ ಮೂರ್ತಿರಾವ್ ಅವರು 1900ರ ಜೂನ್ 18ರಂದು ಮಂಡ್ಯ ಜಿಲ್ಲೆಯ ಅಕ್ಕಿ ಹೆಬ್ಬಾಳಿನಲ್ಲಿ ಜನಿಸಿದರು. ತಂದೆ ಎಂ.ಸುಬ್ಬರಾವ್ ಮತ್ತು ತಾಯಿ ಪುಟ್ಟಮ್ಮ. ಬಾಲ್ಯದ ದಿನಗಳನ್ನು ಮೇಲುಕೋಟೆ, ನಾಗಮಂಗಲಗಳಲ್ಲಿ ಕಳೆದ ಮೇಲೆ 1913ರಲ್ಲಿ ಮೈಸೂರಲ್ಲಿ ವೆಸ್ಲಿಯನ್ ಮಿಷನ್ ಸ್ಕೂಲಿನಲ್ಲಿ ಶಾಲಾ ಶಿಕ್ಷಣ ಮುಗಿಸಿ ಮೈಸೂರು ಮಹಾರಾಜ ಕಾಲೇಜನ್ನು ಸೇರಿದರು. ಬಿ.ಎ. ಪದವಿ (1922), ಎಂ.ಎ. ಪದವಿ (1924) ಪಡೆದರು. ಮಹಾರಾಜ ಕಾಲೇಜಿನಲ್ಲಿ ಟ್ಯೂಟರ್ (1924), ಮೈಸೂರು ವಿಶ್ವವಿದ್ಯಾಲಯದಲ್ಲಿ ...
READ MORE