ಹಿಂದಿ ಪ್ರವಾಸ ಸಾಹಿತ್ಯ ಪಿತಾಮಹ ಎಂದೇ ಕರೆಯಲಾಗುವ ರಾಹುಲ ಸಾಂಕೃತ್ಯಾಯನ ತಮ್ಮ ಬರೆಹ ಹಾಗೂ ಭಾಷಣಗಳ ಮೂಲಕ ಬ್ರಿಟಿಷರ ನಿದ್ದೆಗೆಡಿಸಿ ಮೂರು ವರ್ಷಗಳ ಕಾಲ ಬಂಧನದಲ್ಲಿದ್ದರು. ಸುಮಾರು 150ಕ್ಕೂ ಹೆಚ್ಚು ಕೃತಿಗಳನ್ನು ಬರೆದಿದ್ದಾರೆ. ಇವರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ಪದ್ಮಭೂಷಣ ಪ್ರಶಸ್ತಿ ಸೇರಿದಂತೆ ಹಲವಾರು ಪ್ರಶಸ್ತಿಗಳು ದೊರೆತಿವೆ. ಇವರ ವೋಲ್ಗಾ ಗಂಗಾ ಕೃತಿಯನ್ನು ಕನ್ನಡಕ್ಕೂ ಅನುವಾದಿಸಲಾಗಿದೆ. ರಾಹುಲರ ಜೀವನ-ಸಾಧನೆಯ ಕುರಿತು ಈ ಕೃತಿಯು ಸಂಕ್ಷಿಪ್ತ ವಿವರ ನೀಡಿದೆ.
ಗೀತಾ ಶೆಣೈ ಕನ್ನಡದ ಪ್ರಮುಖ ಲೇಖಕಿ. ಇವರು 1954 ಜೂಬ್ 13 ರಂದು ದಕ್ಷಿಣ ಜಿಲ್ಲೆಯಲ್ಲಿ ಜನಿಸಿದರು. ಹಂಪಿಯಿಂದ ಕನ್ನಡ ಭಾಷೆ ಮತ್ತು ಸಾಹಿತ್ಯದಲ್ಲಿ ಪಿಹೆಚ್.ಡಿ, ಪದವಿ ಪಡೆದಿದ್ದಾರೆ. ಇಂದಿರಾಗಾಂಧಿ ಮಹಿಳಾ ಅಧ್ಯಯನದಲ್ಲಿ ಸಿಡಬ್ಲ್ಯೂಇಡಿ ಕೋರ್ಸ್ ಮುಗಿಸಿದ್ದಾರೆ, ಜೀವನ ಚರಿತ್ರೆ, ಅನುವಾದ ಮತ್ತು ಮಹಿಳಾ ಅಧ್ಯಯನ ಇತ್ಯಾದಿ ಪ್ರಕಾರಗಳಲ್ಲಿ 20ಕ್ಕೂ ಹೆಚ್ಚು ಗ್ರಂಥಗಳನ್ನು ಪ್ರಕಟಿಸಿದ್ದಾರೆ. ಇವರ ಮೊದಲ ಕೃತಿ ಝುಂಪಾ ಲಾಹಿರಿಯವರ ಇಂಟರ್‍ಪ್ರಿಟರ್ ಆಫ್ ಮ್ಯಾಲಡೀಸ್ ಕಥಾಸಂಕಲನದ ಅನುವಾದ `ಬೇನೆಗಳ ದುಭಾಷಿ'. ಬೇನೆಗಳ ದುಭಾಷಿ, ಪರಿಸರ ಅರ್ಥಶಾಸ್ತ್, ಮಧ್ಯಕಾಲೀನ ಭಾರತ, ಸಮಾಜಶಾಸ್ತ್ರದ ಸ್ಥಾಪಕ ಪಿತಾಮಹರು, ಪ್ರಾರಂಭಿಕ ಹಂತದ ...
READ MORE