ಈ ಕೃತಿಯಲ್ಲಿ ರಾಯಚೂರು ಜಿಲ್ಲೆಯ ಪ್ರಾಚೀನ ದೇವಾಲಯಗಳ ಕುರಿತ ಅಧ್ಯಯನವನ್ನು ಕಾಣಬಹುದಾಗಿದೆ. ಪರಕೀಯರ ದಾಳಿಯಿಂದಾಗಿ ಇಲ್ಲನ ಅನೇಕ ದೇವಾಲಯಗಳು ನೆಲಸಮವಾಗಿವೆ ಎಂಬ ವಿಷಯ ಸೇರಿದಂತೆ ಅನೇಕ ವಿಷಯಗಳು ಈ ಕೃತಿಯಲ್ಲಿ ಲಭ್ಯವಿದೆ. ಈ ನಿಟ್ಟಿನಲ್ಲಿ ಇದೊಂದು ಮಹತ್ವದ ಕೃತಿಯಾಗಿದೆ.
ಪ್ರೌಢಶಾಲೆಯಲ್ಲಿ ಚಿತ್ರಕಲಾ ಶಿಕ್ಷಕರಾಗಿದ್ದ ಎಚ್.ಎನ್. ಚಿತ್ರಗಾರ ಅವರು ರಾಯಚೂರಿನವರು. ಚಿತ್ರಕಲಾ ಶಿಕ್ಷಕರ ಸಂಘದ ಅಧ್ಯಕ್ಷರಾಗಿದ್ದ ಅವರಿಗೆ ಕಲೆ ಮತ್ತು ಸಾಹಿತ್ಯ ಕ್ಷೇತ್ರದಲ್ಲಿ ಮಾಡಿದ ಸಾಧನೆಗಾಗಿ ಕನಕರತ್ನ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು. ...
READ MORE