ರಾಜಶೇಖರ್ ಅವರ ಆಯ್ದ ಬರಹಗಳು

Author : ಜಿ.ರಾಜಶೇಖರ

Pages 108

₹ 75.00




Year of Publication: 2009
Published by: ಅಕ್ಷರ ಪ್ರಕಾಶನ
Address: ಹೆಗ್ಗೋಡು, ಹೊನ್ನೇಶ್ವರ ಅಂಚೆ, ಸಾಗರ ತಾಲೂಕು, ಶಿವಮೊಗ್ಗ - 577417
Phone: 9480280401 / 08183-265476

Synopsys

ತಮ್ಮ ಸಮತೂಕದ ವಿಚಾರ ಹಾಗೂ ಬರವಣಿಗೆಯಿಂದ ಓದುಗರಿಗೆ ಪ್ರಿಯರಾದವರು ಜಿ. ರಾಜಶೇಖರ. ವಿಚಾರವಾದಿಯಾದ ಅವರು ಮಂಡಿಸುವ ಸಂಗತಿಗಳು ಓದುಗರನ್ನು ತಣಿಸುವುದಕ್ಕಿಂತ ಹೆಚ್ಚಾಗಿ ಪಕ್ಷಪಾತಿಯಾದವುಗಳು. ವೈಚಾರಿಕತೆಯನ್ನು ಬೆಳೆಸುವ ನಿಟ್ಟಿನಲ್ಲಿ ರಾಜಶೇಖರ ಅವರ ಬರಹಗಳು ಪ್ರಮುಖವಾದವು. ರಾಜಶೇಖರ ಅವರ ಆಯ್ದ ಲೇಖನಗಳನ್ನ ಈ ಸಂಕಲನವು ಒಳಗೊಂಡಿದೆ.

About the Author

ಜಿ.ರಾಜಶೇಖರ
(03 April 1946 - 20 July 2022)

1946ರ ಏಪ್ರಿಲ್ 3ರಂದು ಉಡುಪಿ ಜಿಲ್ಲೆಯ ಗುಂಡ್ಮಿಯಲ್ಲಿ ಜನಿಸಿದ ಜಿ. ರಾಜಶೇಖರ ಅವರು ಪದವಿ ಪಡೆದದ್ದು ಉಡುಪಿಯಲ್ಲಿ. ಮೊದಲಿಗೆ ಕೆಲಕಾಲ ಶಿಕ್ಷಕರಾಗಿ ಕೆಲಸ ಮಾಡಿದ ಇವರು ಬಳಿಕ ಎಲ್‌ಐಸಿಯ ಉದ್ಯೋಗಿಯಾಗಿದ್ದರು. ಸಾಹಿತ್ಯ-ಸಮಾಜ- ರಾಜಕಾರನ ಕುರಿತಂತೆ ಹಾಗೂ ಕೋಮುವಾದವೂ ಸೇರಿದಂತೆ ಸಮಕಾಲೀನ ತುರ್ತಿನ ವಿದ್ಯಮಾನಗಳ ಬಗ್ಗೆ ಅವರು ಬಹುಸಂಖ್ಯೆಯ ಲೇಖನಗಳನ್ನು ಸತತವಾಗಿ ಪ್ರಕಟಿಸುತ್ತಲೇ ಬಂದಿದ್ದರೂ ಈ ಬರಹಗಳು ಸಂಕಲನಗೊಂಡು ಪ್ರಕಟಗೊಂಡಿದ್ದು ಕಡಿಮೆ. ಸಮಕಾಲೀನ ಕನ್ನಡದ ಪ್ರಮುಖ ವಿಮರ್ಶಕ- ಚಿಂತಕರೆಂದು ಮನ್ನಣೆ ಗಳಿಸಿರುವ ರಾಜಶೇಖರ ಅವರು ಎಡಪಂಥೀಯ ಧೋರಣೆಯನ್ನು ನಿಷ್ಠುರ ಆತ್ಮವಿಮರ್ಶೆಯೊಂದಿಗೆ ಕಸಿ ಮಾಡಿದವರು. ಕೃತಿಗಳು: ’ಕಾಗೋಡು ಸತ್ಯಾಗ್ರಹ’, ಪರಿಸರ ...

READ MORE

Related Books