ರಾಮಮನೋಹರ ಲೋಹಿಯಾ ಕೇವಲ ಜನಪ್ರತಿನಿಧಿಯಾಗಿದ್ದು ಮಾತ್ರವಲ್ಲ; ಅವರು ಭಾರತದ ಭವ್ಯ ಸಂಸ್ಕೃತಿ, ಕಪ್ಪು ಕಳಂಕ ಹಚ್ಚಿರುವ ಜಾತಿಯತೆಯ ಕುರಿತು ಆಳವಾಗಿ ಅಭ್ಯಸಿಸಿದ, ವಿಶ್ವವಮಟ್ಟದಲ್ಲಿ ಭಾರತೀಯತೆಯ ಔನ್ನತ್ಯ ಕುರಿತು ಸಮರ್ಥವಾಗಿ ಪ್ರತಿಪಾದಿಸಬಲ್ಲವರಾಗಿದ್ದರು. ಅವರ ಉನ್ನತ ವಿಚಾರಗಳ ಕುರಿತು ಅಂದಿನ ಹಾಗೂ ಇಂದಿನವರೆಗೂ ಎಲ್ಲೆಡೆ ಪ್ರಶಂಸೆ ವ್ಯಕ್ತವಾಗುತ್ತಿದೆ. ಸಮಾಜವಾದಿ ತತ್ವಗಳನ್ನು ತಮ್ಮ ಉಸಿರಾಗಿಸಿಕೊಂಡಿದ್ದ ಲೋಹಿಯಾ ಒಬ್ಬ ಉತ್ತಮ ನಾಯಕರು. ಭಾರತಕ್ಕೆ ಲೋಹಿಯಾ ಚಂತನೆಗಳು ಅಗತ್ಯ ಎಂಬುದನ್ನು ಈ ಕೃತಿಯ ಮೂಲಕ ಲೇಖಕರು ಕಟ್ಟಿಕೊಟ್ಟಿದ್ದಾರೆ.
ಕೆ.ವಿ. ಸುಬ್ಬಣ್ಣ ಕನ್ನಡದ ಅಪರೂಪದ ವ್ಯಕ್ತಿಗಳಲ್ಲಿ ಒಬ್ಬರು. ಮೈಸೂರು ವಿಶ್ವವಿದ್ಯಾನಿಲಯದಿಂದ ಎಂ. ಎ. ಪದವಿ ಪಡೆದ ನಂತರ ಅವರು ಕೃಷಿಕಾಯಕ ಆರಂಭಿಸಿದರು. ಸಾಹಿತ್ಯ ಕ್ಷೇತ್ರದಲ್ಲಿ ಅವರು ಮಾಡಿದ ಸಾಧನೆ ಅಚ್ಚರಿಪಡುವ ಹಾಗಿದೆ. ಕವಿ, ನಾಟಕಕಾರ, ಅನುವಾದಕರಾಗಿದ್ದ ಅವರು 'ಅಕ್ಷರ ಪ್ರಕಾಶನ' 'ನೀನಾಸಂ ರಂಗ ಚಟುವಟಿಕೆ'ಗಳನ್ನು ನಿರ್ವಹಿಸಿದವರು. ಭಾರತೀಯ ಸಂಸ್ಕೃತಿಗೆ ವಿಶಿಷ್ಟ ಮಾದರಿ ಎನ್ನುವ ಹಾಗೆ ಸಾಹಿತ್ಯಕ, ಸಾಂಸ್ಕೃತಿಕ ಚಟುವಟಿಕೆಗಳನ್ನು ಪುಟ್ಟಹಳ್ಳಿಯಲ್ಲಿ ನಡೆಸಿದ್ದು ಒಂದು ದಾಖಲೆ. ಮ್ಯಾಗ್ಸೆಸ್ಸೆ ಪ್ರಶಸ್ತಿಯಿಂದ ಹೆಗ್ಗೋಡು ಅಂತರರಾಷ್ಟ್ರೀಯ ನಕ್ಷೆಯಲ್ಲಿ ದಾಖಲಾಯಿತು. ಕೆ.ವಿ. ಸುಬ್ಬಣ್ಣ ಒಬ್ಬ ವ್ಯಕ್ತಿಯಲ್ಲ, ಮಹಾನ್ ಶಕ್ತಿ. ಅವರ ಬೆಳವಣಿಗೆ ವೈಯಕ್ತಿಕವಾದದ್ದಲ್ಲ, ಸಾಂಘಿಕವಾದದ್ದು. 'ಅಕ್ಷರ ಪ್ರಕಾಶನದ ಮೂಲಕ , 'ನೀನಾಸಂ' ಮೂಲಕ ಅನೇಕ ಪ್ರತಿಭೆಗಳನ್ನು ಅವರು ...
READ MORE