ಕೃತಿಯಲ್ಲಿ ಉಲ್ಲೆಖಿತ ವ್ಯಕ್ತಿ, ಅವರ ಹೆಸರು, ಸಂದರ್ಭ, ಸನ್ನಿವೇಶಗಳನ್ನು ಪ್ರಶ್ನೋತ್ತರ ಕ್ರಮದಲ್ಲಿ ಸಂಕ್ಷಿಪ್ತವಾಗಿ ಕಟ್ಟಿಕೊಡಲಾಗಿದೆ. ಇದು ಸ್ವಲ್ಪದರಲ್ಲಿ ಈ ಮಹಾಕಾವ್ಯ ಮತ್ತು ಪುರಾಣ ಪ್ರಸಂಗಗಳನ್ನು ಚಿಕ್ಕವರೂ ಕೂಡ ತಿಳಿದುಕೊಳ್ಳುವ ರೀತಿಯಲ್ಲಿದೆ.
ಸಾಹಿತಿ, ಸಂಶೋಧಕ ಮತ್ತು ಪತ್ರಕರ್ತರಾಗಿರುವ ಚಂದ್ರಕಾಂತ ಬಿಜ್ಜರಗಿ ಅವರು ವಿದ್ಯುನ್ಮಾನ ವ್ಯವಹಾರ ಕ್ಷೇತ್ರದಲ್ಲಿಯೂ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜಯಪುರ ನಿವಾಸಿಗಳು. ವಿದ್ಯುನ್ಮಾನ ವಿಷಯದಲ್ಲಿ ಡಿಪ್ಲೋಮಾ ಪಡೆದಿದ್ದಾರೆ. ಜ್ಯೋತಿಷ್ಯ ಶಾಸ್ತ್ರ ಮತ್ತು ಸಮ್ಮೋಹನ ಶಾಸ್ತ್ರದಲ್ಲಿ ಅವರಿಗೆ ವಿಶೇಷ ಆಸಕ್ತಿ. ಅವರು ’ಕುರುಬ ದರ್ಪಣ’ ವಾರಪತ್ರಿಕೆಯ ಸಂಪಾದಕರು. ವಿಜಯಪುರ ಜಿಲ್ಲಾ ಕುರಿ ಸಾಕಾಣಿಕೆ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘದ ಮಾಜಿ ಉಪಾಧ್ಯಕ್ಷರು & ಹಾಲಿ ನಿರ್ದೇಶಕರು. ಕನಕದಾಸರ ಕುರಿತ ಸಾಕಷ್ಟು ಬಿಡಿ ಲೇಖನಗಳು ವಾರಪತ್ರಿಕೆ ಮತ್ತು ಮಾಸಪತ್ರಿಕೆಗಳಲ್ಲಿ ಮತ್ತು ಸಂಘ-ಸಂಸ್ಥೆಗಳು ಪ್ರಕಟಿಸಿದ ಸ್ಮರಣಸಂಚಿಕೆಗಳಲ್ಲಿ ಪ್ರಕಟವಾಗಿವೆ. ಕೃತಿಗಳು: ಬಳ್ಳಾರಿ ಪಾಳೆಗಾರ ಬಾಲದ ಹನುಮಪ್ಪ ನಾಯಕ, ಕುರುಬರ ಹೆಜ್ಜೆಗಳು, ಜ್ಯೋರ್ತಿವಿಜ್ಞಾನ, ವಿಜಯನಗರ ಸಾಮ್ರಾಜ್ಯ, ...
READ MORE