ರಂಗನಾಥ ದಿವಾಕರ್ ಸಂಯುಕ್ತ ಕರ್ನಾಟಕ ಪತ್ರಿಕೆಯ ಸಂಪಾದಕರಾಗಿದ್ದ ಇವರು ಕನ್ನಡ ನಾಡುನುಡಿ ಕಟ್ಟುವಲ್ಲಿ ಪ್ರಧಾನ ಪಾತ್ರ ವಹಿಸಿದ್ದರು. ಚಲೇಜಾವ್ ಚಳುವಳಿ ಮತ್ತು ಕರ್ನಾಟಕ ಏಕೀಕರಣ ಚಳುವಳಿಗಳಲ್ಲಿ ಸತತವಾಗಿ ಗುರುತಿಸಿಕೊಂಡು ಸಕ್ರಿಯವಾಗಿ ತಮ್ಮನ್ನು ತಾವು ಹೋರಾಟದಲ್ಲಿ ತೊಡಗಿಸಿಕೊಂಡವರು. ಲೋಕ ಶಿಕ್ಷಣ ಟ್ರಸ್ಟ್ ಮುಖಾಂತರ ಸಂಯುಕ್ತ ಕರ್ನಾಟಕ, ಕರ್ಮವೀರ, ಕಸ್ತೂರಿ ಮತ್ತು ವಿವಿಧ ಜನೋಪಯೋಗಿ ಪುಸ್ತಕಗಳನ್ನು ಪ್ರಕಟಿಸುವ ಸಮೃದ್ಧ ಪ್ರಕಾಶನ ಸಂಸ್ಥೆಯನ್ನು ಕೂಡ ಸ್ಥಾಪಿಸಿದ್ದಾರೆ. ಇದು ಇವರ ಬದುಕಿನ ಹೆಚ್ಚುಗಾರಿಕೆಯನ್ನು ತೋರಿಸುತ್ತದೆ. ಇವರ ಒಟ್ಟು ಬದುಕನ್ನು , ಜೀವನ ಸಾಧನೆಯನ್ನು ಮನೋಜಾ ಪಾಟೀಲರು ಈ ಕೃತಿಯಲ್ಲಿ ವಿವರಿಸಿದ್ದಾರೆ.
ಸಂಯುಕ್ತ ಕರ್ನಾಟಕ ದಿನಪತ್ರಿಕೆ ಮತ್ತು ಕಸ್ತೂರಿ ಮಾಸಪತ್ರಿಕೆಯ ಸಂಪಾದಕರಾಗಿ ಕಾರ್ಯ ನಿರ್ವಹಿಸಿ ನಿವೃತ್ತರಾಗಿರುವ ಮನೋಜ್ ಪಾಟೀಲ್ ಅವರು ಸದ್ಯ ಧಾರವಾಡದ ನಿವಾಸಿಯಾಗಿದ್ದಾರೆ. ಹದಿನೈದಕ್ಕೂ ಹೆಚ್ಚು ಪುಸ್ತಕಗಳನ್ನು ಅವರು ಪ್ರಕಟಿಸಿದ್ದಾರೆ. ...
READ MORE