ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಡಾ. ಕೆ. ಶಿವರಾಮ ಕಾರಂತರ ಕೃತಿ-ರಂಗಪ್ಪನ ಗೊಂಬೆ ಹಾಗೂ ಇತರೆ ಕಥೆಗಳು. ಕಾದಂಬರಿ, ಯಕ್ಷಗಾನ-ಬಯಲಾಟ, ಕಲೆ, ಚಿತ್ರಕಲೆ, ಇತಿಹಾಸ, ಜಾನಪದ ಹೀಗೆ ಹತ್ತು ಹಲವು ಸಾಹಿತ್ಯ ಪ್ರಕಾರಗಳಲ್ಲಿ ಕೃಷಿ ಮಾಡಿರುವ ಲೇಖಕರು ಸಣ್ಣ ಕಥೆ ಬರೆಯುವ ಮೂಲಕ ತಮ್ಮ ಕಥಾ ರಚನೆ ಸಾಮರ್ಥ್ಯವನ್ನೂ ತೋರಿದ್ದಾರೆ. ತಮ್ಮ ಎಂದಿನ ಬರವಣಿಗೆಯ ಶೈಲಿ, ಕಥಾವಸ್ತುವಿನ ಆಯ್ಕೆ, ಸನ್ನಿವೇಶಗಳ ಜೋಡಣೆ ಹಾಗೂ ಪಾತ್ರಗಳ ಸೃಷ್ಟಿ ಮೂಲಕ ಓದುಗರ ಗಮನ ಸೆಳೆಯುತ್ತಾರೆ.
ತಮ್ಮ ಬಹುಮುಖ ಪ್ರತಿಭೆಯಿಂದ ಕನ್ನಡ ಸಾಹಿತ್ಯ ಶ್ರೀಮಂತಗೊಳಿಸಿದ ಕೋಟ ಶಿವರಾಮ ಕಾರಂತರ ಕೊಡುಗೆ ಅನನ್ಯ- ಅಭೂತಪೂರ್ವ. 1902ರ ಅಕ್ಟೋಬರ್ 10ರಂದು ಜನಿಸಿದರು. ತಂದೆ ಶೇಷ ಕಾರಂತ ತಾಯಿ ಲಕ್ಷ್ಮಮ್ಮ. ಕುಂದಾಪುರದಲ್ಲಿ ಪ್ರೌಢಶಾಲಾ ವ್ಯಾಸಂಗವನ್ನು ಮುಗಿಸಿ ಮಂಗಳೂರಿನ ಸರ್ಕಾರಿ ಕಾಲೇಜನ್ನು ಸೇರಿದಾಗಲೆ ಗಾಂಧೀಜಿಯವರ ಅಸಹಕಾರ ಚಳುವಳಿಗೆ ಧುಮುಕಿದರು. ಆಡು ಮುಟ್ಟದ ಸೊಪ್ಪಿಲ್ಲ ಎಂಬಂತೆ ಕಾರಂತರು ಪ್ರವೇಶಿಸದ ಕ್ಷೇತ್ರವಿಲ್ಲ. ಅವರು ಸರ್ಕಾರದಲ್ಲಿ ಅಥವಾ ಇತರರ ಆಶ್ರಯದಲ್ಲಿ ದುಡಿಯಲಿಲ್ಲ. ಒಂಟಿಸಲಗದಂತೆ ನಡೆದರು, ವ್ಯಾಪಾರ ಮಾಡಿದರು, ವಸಂತ, ವಿಚಾರವಾಣಿ ಪತ್ರಿಕೆ ನಡೆಸಿದರು. ಬಾಲವನ ಸ್ಥಾಪಿಸಿದ್ದರು. ಚಲನಚಿತ್ರ , ಯಕ್ಷಗಾನ ಪ್ರಯೋಗಗಳನ್ನು ನಡೆಸಿದ್ದರು, ಹೀಗೆ ...
READ MORE