ರಾಸಾನಿ ಕಥೆಗಳು

Author : ಟಿ.ಡಿ.ರಾಜಣ್ಣ ತಗ್ಗಿ

Pages 160

₹ 115.00




Year of Publication: 2008
Published by: ಧಾತ್ರಿ ಪುಸ್ತಕ
Address: ನಂ. 170, 3ನೇ ಸಿ ಅಡ್ಡರಸ್ತೆ, 9ನೇ ಬ್ಲಾಕ್, ವಿನಾಯಕ ಬಡಾವಣೆ, ನಾಗರಬಾವಿ, 2ನೇ ಹಂತ, ಬೆಂಗಳೂರು-72
Phone: 08023586717

Synopsys

‘ರಾಸಾನಿ ಕಥೆಗಳು’ ತೆಲುಗಿನ ಖ್ಯಾತ ಲೇಖಕ ಡಾ.ವಿ.ಆರ್. ರಾಸಾನಿ ಅವರ ಕಥೆಗಳನ್ನು ಲೇಖಕ ಟಿ.ಡಿ. ರಾಜಣ್ಣ ತಗ್ಗಿ ಅವರು ಈ ಕೃತಿಯನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ. ಒಟ್ಟು 12 ಕತೆಗಳಿದ್ದು, ಈ ಎಲ್ಲ ಕತೆಗಳು ತೆಲುಗಿನ ಪ್ರಸಿದ್ಧ ಲೇಖಕ ರಾಸಾನಿ ಅವರ ಮೆರವಣಿಗೆ, ಪಯಣ ಕಥಾ ಸಂಕಲನಗಳಿಂದ ಆಯ್ಕೆ ಮಾಡಲಾಗಿದೆ. ಈ ಕತೆಗಳು ವಿವಿಧ ಪತ್ರಿಕೆಗಳಲ್ಲಿ ಪ್ರಕಟವಾಗಿ, ಬಹುಮಾನಗಳನ್ನು ಪಡೆದಿವೆ. 

About the Author

ಟಿ.ಡಿ.ರಾಜಣ್ಣ ತಗ್ಗಿ

ಕನ್ನಡದ ಯುವ ಸಂಶೋಧಕ, ಅನುವಾದಕ ಟಿ.ಡಿ. ರಾಜಣ್ಣ ತಗ್ಗಿ ಅವರು ಮೂಲತಃ ತುಮಕೂರು ಜಿಲ್ಲೆ, ಮಧುಗಿರಿ ತಾಲೂಕಿನ ತಗ್ಗಿಹಳ್ಳಿಯವರು. ಬೆಂಗಳೂರು ವಿಶ್ವವಿದ್ಯಾಲಯದಿಂದ ಕನ್ನಡ ಎಂ.ಎ, ಎಂ.ಫಿಲ್ ಮತ್ತು ಪಿಎಚ್.ಡಿ ಪದವಿಗಳನ್ನು ಪಡೆದಿರುವ ಅವರು ಮದರಾಸು ವಿಶ್ವವಿದ್ಯಾಲಯ ಹಾಗೂ ಜೈನ್ ವಿಶ್ವವಿದ್ಯಾಲಯಗಳಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.  ಹಲವಾರು ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ವಿಚಾರ ಸಂಕಿರಣಗಳಲ್ಲಿ ಮೌಲಿಕ ಪ್ರಬಂಧಗಳನ್ನು ಮಂಡಿಸಿರುವ ರಾಜಣ್ಣ ತಗ್ಗಿ ಅವರು ಮದರಾಸು , ಬೆಂಗಳೂರು ಮತ್ತು ಗುಲಬರ್ಗಾ ಆಕಾಶವಾಣಿ ಕೇಂದ್ರಗಳಲ್ಲಿಯೂ ಹಲವು ಸಾಹಿತ್ಯಿಕ ಕಾರ್ಯಕ್ರಮಗಳನ್ನು ನೀಡಿದ್ದಾರೆ.   ಕನ್ನಡ, ತೆಲುಗು, ತಮಿಳು, ಇಂಗ್ಲಿಷ್, ಭಾಷೆ ಬಲ್ಲವರಾಗಿದ್ದು, ...

READ MORE

Related Books