ಅವಿಭಜಿತ ಕಲಬುರಗಿ ಜಿಲ್ಲೆಯ ಶಹಾಪುರ ತಾಲೂಕಿನ ರಸ್ತಾಪುರ ಎಂಬುದು ಭೀಮಕವಿಯ ಊರು. ಹೈದ್ರಾಬಾದ ಕರ್ನಾಟಕ ಪ್ರದೇಶದ ಜಾನಪದ ಲೋಕದಲ್ಲಿ ಉಳಿವ ಶಾಶ್ವತ ಹೆಸರು. ಭೀಮಕವಿಯ ನಾಟಕಗಳು, ಕಾವ್ಯಗಳು, ಆಟಗಳು ಬೆರಗು ಹುಟ್ಟಿಸಿ, ಸಂಶೋಧನೆಗೆ ಆಹ್ವಾನ ನೀಡುತ್ತವೆ. ’ಹಾಲುಮತೋತ್ತೇಜಕ ಪುರಾಣ’ದಿಂದ ಭೀಮಕವಿ ಪ್ರಸಿದ್ಧರಾಗಿದ್ದಾರೆ.
ಡಾ. ಶಾಂತಪ್ಪ ಎನ್. ಡಂಬಳ ಅವರು ಮೂಲತಃ ಕಲಬುರಗಿ ಜಿಲ್ಲೆಯ ಜೇವರ್ಗಿ (ಜನನ: 22-07-1972) ತಾಲೂಕಿನ ಮಳ್ಳಿ ಗ್ರಾಮದವರು. ಕರ್ನಾಟಕ ವಿ.ವಿ.ಯಿಂದ ಬಿ.ಎ, ಗುಲಬರ್ಗಾ ವಿ.ವಿ.ಯಿಂದ ಸ್ನಾತಕೋತ್ತರ ಎಂ.ಎ, ಬಿ.ಈಡಿ, ಗುಲಬರ್ಗಾ ಜಿಲ್ಲೆಯ ವೃತ್ತಿ ನಾಟಕಕಾರರು: ಒಂದು ಅಧ್ಯಯ” ವಿಷಯವಾಗಿ ಎಂ.ಫಿಲ್, ರಸ್ತಾಪುರದ ಭೀಮಕವಿ ಹಾಗೂ ಅವರ ಕೃತಿಗಳು: ಒಂದು ಅಧ್ಯಯನ’ ವಿಷಯವಾಗಿ ಪಿ.ಎಚ್.ಡಿ ಪಡೆದಿದ್ದಾರೆ. ಕೃತಿಗಳು: ರಸ್ತಾಪೂರ ಭೀಮಕವಿ ವಿರಚಿತ ದೋರನಹಳ್ಳಿ ಶ್ರೀ ಮಹಾಂತೇಶ್ವರ ಪುರಾಣ (ಸಂಪಾದನೆ), ರಸ್ತಾಪುರ ಭೀಮಕವಿಯ ಹಾಲುಮತೋತ್ತೇಜಕ ಪುರಾಣ, ಮದುವೆ: ಒಂದು ಜನಪದೀಯ ಅಧ್ಯಯನ, ಗುಲಬರ್ಗಾ ಜಿಲ್ಲೆಯ ವೃತ್ತಿ ನಾಟಕಕಾರರು, ರಸ್ತಾಪುರದ ಭೀಮಕವಿ (ಸಂಶೋಧನಾ ...
READ MORE