ಖ್ಯಾತ ಸಾಹಿತಿ ಹಾಗೂ ವಿಮರ್ಶಕ ಡಾ. ಡಿ.ಎಸ್. ನಾಗಭೂಷಣ ಅವರ ಈವರೆಗಿನ ಸಾಹಿತ್ಯಕ ವಿಮರ್ಶೆ ಬರಹಗಳ ಸಂಗ್ರ ಕೃತಿ-ರೂಪ ರೂಪಗಳನು ದಾಟಿ. ನಾಡಿನ ಹೆಸರಾಂತ ಕೃತಿಗಳ ಹಾಗೂ ಉದಯೋನ್ಮುಖ ಕವಿ-ಸಾಹಿತಿ-ಲೇಕಕರ ಕೃತಿಗಳನ್ನು ವಿಮರ್ಶಿಸಿದ್ದು, ಆ ಬರಹಗಳನ್ನು ಇಲ್ಲಿ ಸಂಕಲಿಸಲಾಗಿದೆ. ಈ ವಿಮರ್ಶ ಗ್ರಂಥವು ವಿಮರ್ಶಾ ವಲಯದಲ್ಲಿ, ಹಾಗೂ ಸಾಹಿತ್ಯಕ ಸಂಶೋಧನೆಯ ವಿದ್ಯಾರ್ಥಿಗಳಿಗೆ ಉತ್ತಮ ಮಾರ್ಗದರ್ಶಿಯಾಗಬಲ್ಲುದು.
ಗಣಿತ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದ ಡಿ.ಎಸ್.ನಾಗಭೂಷಣ ಅವರು 1952 ಫೆಬ್ರವರಿ 1 ರಂದು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಹೊಸಕೋಟೆ ತಾಲ್ಲೂಕಿನ ತಿಮ್ಮಸಂದ್ರದಲ್ಲಿ ಜನಿಸಿದರು. ದೆಹಲಿ ಆಕಾಶವಾಣಿಯಲ್ಲಿ ಕನ್ನಡ ವಾರ್ತಾ ವಾಚಕರಾಗಿ1975ರಿಂದ 1981ರವರೆ ಸೇವೆ ಸಲ್ಲಿಸಿದ್ದ ಅವರು ಆನಂತರದಲ್ಲಿ ಸಹಾಯಕ ನಿಲಯ ನಿರ್ದೇಶಕರಾಗಿ 7 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು. 2005ರಲ್ಲಿ ವೃತ್ತಿಯಿಂದ ಸ್ವಯಂ ನಿವೃತ್ತಿ ಪಡೆದರು. ಓದು, ಬರವಣಿಗೆಯನ್ನು ಹವ್ಯಾಸವಾಗಿಸಿಕೊಂಡಿರುವ ಅವರು ‘ಇಂದಿಗೆ ಬೇಕಾದ ಗಾಂಧಿ’, ‘ಲೋಹಿಯಾ ಜೊತೆಯಲ್ಲಿ’, ‘ರೂಪ ರೂಪಗಳನು ಧಾಟಿ’, ‘ಕುವೆಂಪು ಒಂದು ಪುನರನ್ವೇಷಣೆ’, ‘ಕುವೆಂಪು ಸಾಹಿತ್ಯ ದರ್ಶನ’, ‘ಜಯ ಪ್ರಕಾಶ ನಾರಾಯಣ ...
READ MORE