‘ಋತ ಸತ್ಯ ಧರ್ಮ’ ಡಿ.ವಿ.ಜಿ ಅವರ ಪ್ರಬಂಧ ಸಂಕಲನ. ಋತ, ಸತ್ಯ ಮತ್ತು ಧರ್ಮ ಇವುಗಳ ಸ್ವರೂಪ ಹಾಗೂ ಅನ್ಯೋನ್ಯ ಸಂಬಂಧವನ್ನು ವಿವರಿಸುವುದು ಈ ಪುಸ್ತಕದ ಉದ್ದೇಶ.
ದೇವರು ಎಂಬ ಮಹಾ ಚೈತನ್ಯದಲ್ಲಿರುವ ಮೂಲ ನಂಬಿಕೆಯೇ ಋತ. ಋತದಿಂದ ಸತ್ಯದ ವಿವೇಚನೆ, ಸತ್ಯಾನುಸರಣೆಯಿಂದ ಹೊರಡುವ ಕ್ರಿಯೆಯೇ ಧರ್ಮ; ಆತ್ಮೋದ್ದಾರಕ್ಕೂ ಜಗತ್ತಿನ ಹಿತಸಾಧನೆಗೂ ಸಾಧಕವಾದ ವರ್ತನೆಯೇ ಧರ್ಮ ಎನ್ನುತ್ತಾರೆ ಡಿ.ವಿ.ಜಿ. ಬದುಕಿನ ಮಹತ್ವದ ಬಗ್ಗೆ ಅರಿಯಲು ಈ ಕೃತಿ ಸಹಕಾರಿ.
ಮಂಕುತಿಮ್ಮನ ಕಗ್ಗ ಕಾವ್ಯದಿಂದ ಲೋಕವಿಖ್ಯಾತರಾದ ಡಿವಿಜಿ ಅವರು (ದೇವನಹಳ್ಳಿ ವೆಂಕಟರಮಣಯ್ಯ ಗುಂಡಪ್ಪ) ಲೇಖಕ- ಪತ್ರಕರ್ತ. ಕೋಲಾರ ಜಿಲ್ಲೆಯ ಮುಳಬಾಗಿಲಿನಲ್ಲಿ 1887ರ ಮಾರ್ಚ್ 17ರಂದು ಜನಿಸಿದ ಗುಂಡಪ್ಪ ಅವರು ಪ್ರೌಢಾಶಾಲಾ ಶಿಕ್ಷಣವನ್ನು ಮೈಸೂರು ಮಹಾರಾಜ ಪ್ರೌಢಶಾಲೆಯಲ್ಲಿ ಪಡೆದರು. ಮೆಟ್ರಿಕ್ ಪರೀಕ್ಷೆಯಲ್ಲಿ ಉತ್ತೀರ್ಣರಾಗದಿದ್ದರೂ ಸ್ವಂತ ಅಧ್ಯಯನದಿಂದ ಕನ್ನಡ, ಸಂಸ್ಕೃತ, ಇಂಗ್ಲಿಷ್ ಭಾಷೆಗಳಲ್ಲಿ ಪರಿಣತರಾಗಿದ್ದರು. ಮುಳುಬಾಗಿಲಿನ ಒಂದು ಶಾಲೆಯಲ್ಲಿ ಕೆಲವು ಕಾಲ ಬದಲಿ ಅಧ್ಯಾಪಕರಾಗಿ ಕಾರ್ಯ ನಿರ್ವಹಿಸಿದರು. ಅನಂತರ ಕೋಲಾರದ ಸೋಡಾ ಫ್ಯಾಕ್ಟರಿಯೊಂದರಲ್ಲಿ ಕೆಲಸ ಮಾಡಿ ಬೇಸತ್ತು ಬೆಂಗಳೂರಿನಲ್ಲಿ ಜಟಕಾಬಂಡಿಗೆ ಬಣ್ಣ ಬಳಿಯುವ ಕಾರ್ಖಾನೆಯಲ್ಲಿ ಕೆಲಕಾಲ ಕೆಲಸ ಮಾಡಿದರು. ಅನಂತರ ಪತ್ರಿಕಾರಂಗ ...
READ MORE