ಎಸ್. ಡಿ. ಇಂಚಲ

Author : ಬಸವರಾಜ ಜಗಜಂಪಿ

Pages 144

₹ 20.00




Year of Publication: 2013
Published by: ಲಿಂಗಾಯತ ಅಧ್ಯಯನ ಸಂಸ್ಥೆ
Address: ಶ್ರೀ ಜಗದ್ಗುರು ತೋಂಟದಾರ್ಯ ಸಂಸ್ಥಾನಮಠ,ಎಡೆಯೂರು, ಡಂಬಳ, ಗದಗ

Synopsys

‘ಎಸ್. ಡಿ. ಇಂಚಲ’ ಶಿಕ್ಷಕ ವೃತ್ತಿಯಿಂದ ಪ್ರಾಂಶುಪಾಲ ಹುದ್ದೆಯವರೆಗೂ ಶಿಕ್ಷಣ ಇಲಾಖೆಯಲ್ಲಿ ಸೇವೆ ಸಲ್ಲಿಸಿದ ಕವಿ ಎಸ್.ಡಿ. ಇಂಚಲ ಅವರ ಬದುಕು ಮತ್ತು ಬರಹಗಳನ್ನು ಅನಾವರಣಗೊಳಿಸುವ ಕೃತಿ. ಲೇಖಕ ಡಾ. ಬಸವರಾಜ ಜಗಜಂಪಿ ಕೃತಿಯನ್ನು ರಚಿಸಿದ್ದಾರೆ. ಶಿಕ್ಷಕರಾಗಿ ಮಕ್ಕಳಿಗೆ ಪಾಠ ಹೇಳುತ್ತಲೇ ನಾಡು-ನುಡಿಗಾಗಿ ಹಲವು ಕಾರ್ಯಗಳಲ್ಲಿ ತೊಡಗಿಕೊಂಡು ಹಲವು ಹಂತಗಳಲ್ಲಿ ಕನ್ನಡವನ್ನು ಬೆಳೆಸುವ ಕೆಲಸ ಮಾಡಿದ ಎಸ್.ಡಿ. ಇಂಚಲ ಅವರ ಬದುಕಿನ ಸಮಗ್ರ ನೋಟವನ್ನು ಈ ಕೃತಿ ಕಟ್ಟಿ ಕೊಡುತ್ತದೆ.

About the Author

ಬಸವರಾಜ ಜಗಜಂಪಿ
(25 May 1950)

ಸಾಹಿತಿ ಬಸವರಾಜ ಜಗಜಂಪಿ ಅವರು 1950 ಮೇ 25ರಂದು ಬೆಳಗಾವಿಯಲ್ಲಿ ಜನಿಸಿದರು. ತಂದೆ ಕಲ್ಲಪ್ಪನವರ, ತಾಯಿ ಈರವ್ವ. ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಿಂದ ಕನ್ನಡ ಸ್ನಾತಕೋತ್ತರ ಪದವೀಧರರು. ಬೆಳಗಾವಿ ಲಿಂಗರಾಜ ಮಹಾವಿದ್ಯಾಲಯದಲ್ಲಿ ಕನ್ನಡ ಪ್ರಾಧ್ಯಾಪಕರಾಗಿ,ಪ್ರಸ್ತುತ ಗ್ರಂಥಾಲಯ ಆಡಳಿತ ನಿರ್ದೇಶಕರಾಗಿ ಕೆ.ಎಲ್.ಇ. ಮಹಾವಿದ್ಯಾಲಯ ಬೆಳಗಾವಿಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ವಚನ ಸಾಹಿತ್ಯ, ಜನಪದ ಸಾಹಿತ್ಯ ಕ್ಷೇತ್ರಗಳಲ್ಲಿ ಹೆಚ್ಚಿನ ಆಸಕ್ತಿ ಇದೆ. ಪ್ರಮುಖ ಕೃತಿಗಳೆಂದರೆ ಕನ್ನಡ ಸಾಹಿತ್ಯ ಹಾಗೂ ಜೀವನ ಮೌಲ್ಯಗಳು, ಬಸವಪ್ರಭಪ್ಪನವರು ಹಂಪಣ್ಣವರ, ಮಲ್ಲಿಕಾರ್ಜುನ ದರ್ಶನ, ಕನ್ನಡ ಕಾಯಕಯೋಗಿ ಶಿವಬಸವ ಸ್ವಾಮಿಜಿ, ಕವಿ ಸಿದ್ದೇನಂಜೇಶ, ಕೆ.ಎಲ್.ಇ. ಸೊಸೈಟಿ, ಫ.ಗು. ಹಳಕಟ್ಟಿ ಸಮಗ್ರ ಸಾಹಿತ್ಯ, ಬೆಳಗಲಿ ಬಯಲ ಸಿರಿ, ರಸಾಯನ, ...

READ MORE

Related Books