ಎಸ್.ವಿ. ಪರಮೇಶ್ವರ ಭಟ್ಟರ ಕುವೆಂಪು ಸಾಹಿತ್ಯ ದರ್ಶನ-೧
ಎ.ವಿ. ನಾವಡ ಅವರು 1946 ಏಪ್ರಿಲ್ 28ರಲ್ಲಿ ಮಂಗಳೂರು ಸಮೀಪದ ಕೋಟೆಕಾರು ಎಂಬಲ್ಲಿ ಜನಿಸಿದರು. ತಂದೆ ಕವಿ ಅಮ್ಮೆಂಬಳ ಶಂಕರನಾರಾಯಣ ನಾವಡ, ತಾಯಿ ಪಾರ್ವತಿ. ಮಂಗಳೂರಿನ ಸಂತ ಎಲೋಷಿಯಸ್ ಕಾಲೇಜಿನಲ್ಲಿ ಪದವಿಯನ್ನೂ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಎಂ.ಎ. ಪದವಿಯನ್ನೂ ಪಡೆದರು. ಕುಂದಾಪುರದ ಭಂಡಾರ್‌ಕರ್ಸ್ ಕಾಲೇಜಿನಲ್ಲಿ 1970ರಿಂದ-94ರವರೆಗೆ ಉಪನ್ಯಾಸಕರಾಗಿ, ವಿಭಾಗ ಮುಖ್ಯಸ್ಥರಾಗಿ, ಪ್ರಾಧ್ಯಾಪಕರಾಗಿ 24 ವರ್ಷ ಸೇವೆ ಸಲ್ಲಿಸಿದರು. 1994ರಿಂದ ಕನ್ನಡ ವಿಶ್ವವಿದ್ಯಾಲಯದ ಹಸ್ತಪ್ರತಿ ಶಾಸ್ತ್ರ ವಿಭಾಗದ ಮುಖ್ಯಸ್ಥರಾಗಿ, ಪ್ರಾಧ್ಯಾಪಕರಾಗಿ, ಪ್ರಸಾರಾಂಗದ ನಿರ್ದೇಶಕರಾಗಿ, ಪುರಂದರದಾಸ ಅಧ್ಯಯನ ಪೀಠದ ಅಧ್ಯಕ್ಷರಾಗಿ, ಉಡುಪಿಯ ಎಂ.ಜಿ.ಎಂ. ಕಾಲೇಜಿನ ಜಾನಪದ ರಂಗಕಲೆಗಳ ಅಧ್ಯಯನ ಕೇಂದ್ರದಲ್ಲಿ ಸಂಶೋಧಕರಾಗಿ, ಉಡುಪಿಯ ಗೋವಿಂದಪೈ ಸಂಶೋಧನ ಕೇಂದ್ರದ ...
READ MORE