ಸಾಹಿತ್ಯ ಮತ್ತು ಅಭಿರುಚಿ -ಈ ಕೃತಿಯ ಕರ್ತೃ ಶಂಕರ ಮೊಕಾಶಿ ಪುಣೇಕರ್. ಸಾಹಿತ್ಯ ವಿಮರ್ಶೆಯ ಕ್ಷೇತ್ರದಲ್ಲಿ ಹೊಸ ಹಾದಿಗಳನ್ನು ತೆರೆದು ತೋರಿದವರ ಪೈಕಿ ಪುಣೇಕರ್ ಪ್ರಮುಖರು. ಹೊಸ ವಿಮರ್ಶಾ ವಿಧಾನವೊಂದನ್ನು ತೋರಿದವರು. ಕೃತಿಯೊಂದರ ಪ್ರವೇಶಿಕೆ ಹೇಗಿರಬೇಕು ಎಂಬುದನ್ನು ವಿದ್ವತ್ ಪೂರ್ಣವಾಗಿ ತಮ್ಮ ವಿಚಾರಗಳನ್ನು ಮಂಡಿಸಿದ ಕೃತಿ ಇದು. ಅಪರೂಪದ ಚಿಂತನೆಗಳನ್ನು ಕಟ್ಟಿಕೊಟ್ಟಿದ್ದಾರೆ. ಯಾವುದೇ ಒಂದು ಉತ್ತಮ ಕೃತಿಯನ್ನು ಹೇಗೆ ನೋಡಬೇಕು, ಸಂವೇದನಾಶೀಲ ವಿಮರ್ಶೆಯ ಪರಿಭಾಷೆ ಹೇಗಿರಬೇಕು ಎಂಬಿತ್ಯಾದಿ ವಿಷಯಗಳನ್ನು ಈ ಕೃತಿಯಲ್ಲಿ ಚರ್ಚಿಸಿದ್ದಾರೆ.
ಶಂಕರ ಮೊಕಾಶಿ ಪುಣೇಕರ ಅವರು ಹುಟ್ಟಿದ್ದು 1928, ಧಾರವಾಡದಲ್ಲಿ. ಅಲ್ಲಿಯೇ ತಮ್ಮ ಶಿಕ್ಷಣವನ್ನು ಮುಗಿಸಿದರು. ಬಿ.ಎ.ಪದವಿ ಮುಗಿದ ನಂತರ ನಾಲ್ಕು ವರ್ಷಗಳ ಕಾಲ ವಿಜಾಪುರ, ಕಾರವಾರ, ಧಾರವಾಡಗಳಲ್ಲಿ ಪ್ರೌಢಶಾಲಾ ಶಿಕ್ಷಕರಾಗಿದ್ದರು. ಕರ್ನಾಟಕ ವಿಶ್ವವಿದ್ಯಾನಿಲಯದಲ್ಲಿ ಎಂ.ಎ.ಪದವಿ ಮತ್ತು ಪಿಎಚ್.ಡಿ ಪದವಿಯನ್ನು ಪಡೆದರು. ಬೆಳಗಾವಿಯ ಆರ್.ಪಿ.ಡಿ.ಕಾಲೇಜು, ಲಿಂಗರಾಜ ಕಾಲೇಜು, ಮುಂಬಯಿಯ ಕೆ.ಸಿ.ಕಾಲೇಜು, ಐ.ಐ.ಟಿಗಳಲ್ಲಿ ಅಧ್ಯಾಪಕರಾಗಿ, ಕರ್ನಾಟಕ ವಿಶ್ವವಿದ್ಯಾನಿಲಯದ ಕನ್ನಡ ಅಧ್ಯಯನ ಸಂಸ್ಥೆಯಲ್ಲಿ ಕನ್ನಡ ಪ್ರಾಧ್ಯಾಪಕರಾಗಿಯೂ ಸೇವೆ ಸಲ್ಲಿಸಿದರು. 1988ರಲ್ಲಿ ನಿವೃತ್ತಿಯ ನಂತರ ಮೂರು ವರ್ಷಗಳ ಕಾಲ ಶ್ರೀ ಸತ್ಯಸಾಯಿಬಾಬಾ ಉನ್ನತ ಶಿಕ್ಷಣ ಸಂಸ್ಥೆಯಲ್ಲಿ ಸಂದರ್ಶಕ ಪ್ರಾಧ್ಯಾಪಕರಾಗಿದ್ದರು. ಕನ್ನಡ ಮತ್ತು ಇಂಗ್ಲಿಷ್ ...
READ MORE