ಸಾಹಿತ್ಯ ವಿಮರ್ಶೆ- ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಮರ್ಶೆಯ ಪರಿಭಾಷೆ ಇನ್ನೂ ನಿಶ್ಛಿತ ರೂಪ ಪಡೆದುಕೊಂಡಿಲ್ಲ, ಅನೇಕ ಪರಿಕಲ್ಪನೆಗಳ ಅರ್ಥ ವ್ಯಾಪ್ತಿ ಸ್ಪಷ್ಟವಾಗಿಲ್ಲ, ಸಾಕಷ್ಟು ಪ್ರಮಾಣದಲ್ಲಿ ಪ್ರಬುದ್ಧ ವಿಮರ್ಶೆ ಪ್ರಕಟವಾಗುತ್ತಿದ್ದರೂ ವಿಮರ್ಶೆಗೆ ಸಂಬಂಧಿಸಿದ ಮೂಲಭೂತ ಸಾಮಾಗ್ರಿ ತಕ್ಕ ಪ್ರಮಾಣದಲ್ಲಿ ಬಂದಿಲ್ಲ. ಈ ಅವಶ್ಯಕತೆ ಪೂರೈಸುವ ದೃಷ್ಟಿಯಿಂದ ಕರ್ನಾಟಕ ಸಾಹಿತ್ಯ ಅಕಾಡೆಮಿ ಸಾಹಿತ್ಯ ಪಾರಿಭಾಷಿಕ ಮಾಲೆ ಎಂಬ ಯೋಜನೆಯನ್ನು ಆರಂಭಿಸಿತು.
ಈ ಮಾಲೆಯ ಭಾಗವಾಗಿ ಪ್ರಕಟವಾದ ಕೃತಿ ಸಾಹಿತ್ಯ ವಿಮರ್ಶೆ. ಈ ಮಾಲೆಯಲ್ಲಿ ಇಪ್ಪತೈದು ಪುಸ್ತಕಗಳನ್ನು ಹೊರತಂದಿದ್ದು, ಅವುಗಳ ವಿಷಯಗಳನ್ನು ಕನ್ನಡ ಸಾಹಿತ್ಯದ ಪ್ರಸ್ತುತತೆ ದೃಷ್ಟಿಕೋನದಿಂದ ಆಯ್ಕೆ ಮಾಡಲಾಗಿದೆ. ಈ ಮಾಲಿಕೆ ಕನ್ನಡ ಸಾಹಿತ್ಯ ದೃಷ್ಟಿಕೋನದ ಕೇಂದ್ರಬಿಂದು ಎನ್ನಬಹುದು.
ರಾಮಚಂದ್ರನ್ ಅವರು ಜನಿಸಿದ್ದು (ಜ ೧೯೩೬) ಮೈಸೂರು ಜಿಲ್ಲೆಯ ಚಿಲ್ಕುಂದ ಗ್ರಾಮದಲ್ಲಿ. ಮೈಸೂರು ವಿಶ್ವವಿದ್ಯಾಲಯದಿಂದ ಎಂ.ಎ. ಪದವಿ, ಅಮೆರಿಕೆಯ ಮಯಾಮಿ ವಿಶ್ವವಿದ್ಯಾಲಯದಿಂದ ಪಿಎಚ್. ಡಿ. ಪದವಿ. ಕರ್ನಾಟಕ, ಮಹಾರಾಷ್ಟ್ರ, ಅಮೆರಿಕ, ಸೌದಿ ಅರೇಬಿಯಾ, ಸೋಮಾಲಿಯಾಗಳಲ್ಲಿ ಅಧ್ಯಾಪಕರಾಗಿ ಕಾರ್‍ಯ ನಿರ್ವಹಿಸಿದ್ದಾರೆ. ೧೯೯೬ರಲ್ಲಿ ಮಂಗಳೂರು ವಿಶ್ವವಿದ್ಯಾಲಯದಿಂದ ಅಧ್ಯಾಪಕರಾಗಿ ನಿವೃತ್ತಿ. ಸಾಹಿತ್ಯ ವಿಮರ್ಶೆ, ವಸಾಹತೋತ್ತರ ಚಿಂತನೆ, ತೌಲನಿಕ ಸಾಹಿತ್ಯ, ಪರಂಪರೆ ಪ್ರತಿರೋಧ, ಎಡ್ವರ್ಡ್ ಸೈದ್, ಬಯಲುರೂಪ, ರಕ್ತ-ರೂಪಣೆ, ಹೊಸ ಮಡಿಯ ಮೇಲೆ ಚದುರಂಗ, ಗಿರೀಶ ಕಾರ್ನಾಡರ ಚಾರಿತ್ರಿಕ ನಾಟಕಗಳು ವಿಮರ್ಶಾ ಕೃತಿಗಳು. ಶೋಧ ಕಾದಂಬರಿ, ಕಸಾಂದ್ರ ಕಥಾ ಸಂಕಲನ. ಇನಾಂದಾರ್ ಪ್ರಶಸ್ತಿ, ...
READ MORE