ಕನ್ನಡದ ಖ್ಯಾತ ಹಾಸ್ಯ ಸಾಹಿತಿ ಬೀchi ಅವರ ಕೃತಿ ಸಾಹುಕಾರ ಸುಬ್ಬಮ್ಮ. ಸಾಮಾಜಿಕ ವಸ್ತುವುಳ್ಳ ಈ ಕಾದಂಬರಿಯಲ್ಲಿ ಹಾಸ್ಯ-ವ್ಯಂಗ್ಯ-ವಿಡಂಬನೆ ಮೂಲಕ ಆರೋಗ್ಯವಂತ ಸಮಾಜ ನಿರ್ಮಾಣದ ಹಾಗೂ ಮನುಷ್ಯನ ಸಣ್ಣತನದ ವಿರುದ್ಧ ಜಾಗೃತಿ ಮೂಡಿಸುವ ಉದ್ದೇಶವನ್ನು ಕಾಣಬಹುದು.
'ಬೀಚಿ' ಎಂಬುದು ರಾಯಸಂ ಭೀಮಸೇನರಾವ್ ಅವರ ಕಾವ್ಯನಾಮ. ಅವರು ಜನಿಸಿದ್ದು 1913ರ ಏಪ್ರಿಲ್ 23ರಂದು ಬಳ್ಳಾರಿ ಜಿಲ್ಲೆಯ ಹರಪನ ಹಳ್ಳಿಯಲ್ಲಿ. ತಂದೆ ರಾಯಸಂ ಶ್ರೀನಿವಾಸರಾವ್, ತಾಯಿ ಭಾರತಮ್ಮ. 'ಬೀಚಿ' ಯವರ ಹೆಸರಿನ ಹಾಗೆ ಅವರ ಸಹಿಯೂ ವಿಚಿತ್ರ- 'ಬಿ' ಕನ್ನಡವಾದರೆ 'ಚಿ' ಇಂಗ್ಲಿಷು. ಸತಿ ಸೂಳೆ, ಸರಸ್ವತಿ ಸಂಹಾರ, ಖಾದಿ ಸೀರೆ, ಹೆಂಣು ಕಾಣದ ಗಂಡ, ಸತ್ತವನು ಎದ್ದುಬಂದಾಗ, ಮೇಡಮ್ಮನ ಗಂಡ, ಏರದ ಬಳೆ, ಬಂಗಾರದ ಕತ್ತೆ, ಮೂರು ಹೆಂಣು ಐದು ಜಡೆ, ಸುನಂದೂಗ ಏನಂತೆ, ಲೇವಡಿ ಟೈಪಿಸ್ಟ್, ಆರಿದ ಚಹಾ, ಬಿತ್ತಿದ್ದೇ ಬೇವು, ಕಾಮಂಣ (ಕಾದಂಬರಿಗಳು). ತಿಂಮನ ತಲೆ, ಆರು ಏಳು ಸ್ತ್ರೀ ಸೌಖ್ಯ, ಅಮ್ಮಾವ್ರ ಕಾಲ್ಗುಣ, ...
READ MORE