ರಾಜ್ಯ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಕಾದಂಬರಿ-ಸದಾನಂದ. ಎಂ.ಕೆ.ಇಂದಿರಾ ಅವರು ರಚಿಸಿದ್ದು,ವಿಧವಾ ವಿವಾಹ ಹಾಗೂ ಅದರ ಬಾಧಕ ಅಂಶಗಳ ಬಗ್ಗೆ ಮನದಟ್ಟು ಮಾಡಿಕೊಡುವ ಕಥಾ ವಸ್ತುವಿನ ಕಾದಂಬರಿ. ಶಾಸ್ತ್ರಕ್ಕಿಂತ ಮದುವೆಯಾಗ ಬಯಸುವ ಹೆಣ್ಣು-ಗಂಡಿನ ಮನಸ್ಸುಗಳು ಮುಖ್ಯ ಎನ್ನುವ ಸಂದೇಶ ಇಲ್ಲಿದೆ. ಚಿಕ್ಕಮಗಳೂರಿನ ಕಾಫಿ ತೋಟಗಳ ವರ್ಣನೆ, ನೈಸರ್ಗಿಕ ಹಸಿರಿನೊಂದಿಗೆ ಪುಳಕ ಗೊಳ್ಳುವ ಮನಸ್ಸು ಇಂತಹ ವಿವರಣೆಗಳು ಕಾದಂಬರಿಯ ಓದಿನ ಆಕರ್ಷಣೆ ಹೆಚ್ಚಿಸುತ್ತವೆ.
ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ಪ್ರಸಿದ್ದ ಕಾದಂಬರಿಗಾರ್ತಿಯರಲ್ಲಿ ಒಬ್ಬರಾದ ಎಂ.ಕೆ.ಇಂದಿರ ಹುಟ್ಟಿದ್ದು 05-01-1917 ರಂದು. ಊರು ಮಲೆನಾಡಿನ ತೀರ್ಥಹಳ್ಳಿ. ತಂದೆ ತರೀಕೆರೆ ಸೂರ್ಯನಾರಾಯಣ, ತಾಯಿ ಬನಶಂಕರಮ್ಮ. ಇಂದಿರಾ ಓದಿದ್ದು, ಕನ್ನಡ ಮಾಧ್ಯಮಿಕ ಶಾಲೆಯ 2ನೇಯ ತರಗತಿವರೆಗೆ ಮಾತ್ರ. ತಮ್ಮ 12 ವರ್ಷಕ್ಕೆ ಮದುವೆಯಾಯಿತು. ಅವರು ಬರೆಯಲು ಆರಂಭಿಸಿದ್ದು 1963ರಲ್ಲಿ. ತುಂಗಭದ್ರ ಅವರ ಮೊದಲ ಕೃತಿ. ಮಲೆನಾಡಿನ ಸಹ್ಯಾದ್ರಿಶ್ರೇಣಿ, ಭೀಮವೃಕ್ಷರಾಜಿ, ಹಕ್ಕಿಗಳ ಇಂಚರ, ಹಸಿರು.ಇವೆಲ್ಲವೂ ಇಂದಿರ ಅವರ ಕಾದಂಬರಿಗಳಲ್ಲಿ ರಾರಾಜಿಸಿರುತ್ತವೆ. ಅವರ ಮೊಟ್ಟಮೊದಲ ಕಾದಂಬರಿ "ತುಂಗಭದ್ರ"."ತುಂಗಭದ್ರೆ"ಯನ್ನು ಮೆಚ್ಚಿಕೊಂಡು ಕೀರ್ತಿನಾಥ ಕುರ್ತಕೋಟಿಯವರು ಒಂದು ಧೀರ್ಘವಾದ ಮುನ್ನುಡಿ ಬರೆದರು.ಈ ಕಾದಂಬರಿ ವಿಶ್ವವಿದ್ಯಾನಿಲಯದ ಪದವಿ ...
READ MOREಸದಾನಂದ ಕನ್ನಡ ಕಾದಂಬರಿ ವಿಮರ್ಶೆ
ಕರ್ನಾಟಕ ಸಾಹಿತ್ಯ ಅಕಾಡೆಮಿ-1964-65