‘ಸದ್ಭಾವ’ ಕೃತಿಯು ಚೆನ್ನವೀರ ಕಣವಿ ಅವರ ಲೇಖನಗಳ ಸಂಕಲನವಾಗಿದೆ. ಈ ಕೃತಿಯ್ಲಲಿನ ಕೆಲವೊಂದು ವಿಚಾರಗಳು ಹೀಗಿವೆ : ಸ.ಸ.ಮಾಳವಾಡ, ಬೆಟಗೇರಿ ಕೃಷ್ಣಶರ್ಮ, ಬಸವರಾಜ ಸಾದರ ಮುಂತಾದ ಲೇಖಕರ ಪುಸ್ತಕಗಳಿಗೆ ಮುನ್ನುಡಿಯನ್ನು ಬರೆದಿದ್ದಾರೆ. ಉದಯೋನ್ಮುಖ ಲೇಖಕರ ಸಂಕಲನಗಳಿಗೂ ಮುನ್ನುಡಿ ಬರೆದು ಪ್ರೋತ್ಸಾಹಿಸಿದ್ದಾರೆ. ಶೆ.ಗೋ.ಕುಲಕರ್ಣಿಯವರ `ನಾ ಕಂಡ ಗೆಳೆಯರ ಗುಂಪು‘ ಪುಸ್ತಕಕ್ಕೆ ಬರೆದ ಮೂರು ಕೃತಿಗಳಿಗೆ ಅವರು ಪ್ರತ್ಯೇಕ ಬೆನ್ನುಡಿಗಳನ್ನು ಬರೆದಿದ್ದು, ಅವು ಪ್ರತ್ಯೇಕವಾಗಿಯೇ ಪ್ರಕಟವಾಗಿವೆ. ಹೀಗೆ ಪ್ರೋತ್ಸಾಹದಾಯಕ ಮುನ್ನುಡಿ-ಬೆನ್ನುಡಿಗಳಿಂದ ಅವರು ತರುಣ ಬರಹಗಾರರನ್ನು ಹಾರೈಸಿದ್ದಾರೆ. ಕೆಲವು ಹಿರಿಯ ಲೇಖಕರ ಕೃತಿಗಳಿಗೆ ಬರೆದ ಬೆನ್ನುಡಿ, ಮುನ್ನುಡಿಗಳನ್ನು ಹೊರತುಪಡಿಸಿದರೆ ಒಂದು ಕಾಲಘಟ್ಟದ ಸಾಹಿತ್ಯ ಸಂದರ್ಭವನ್ನು ಅರಿಯಲು ಈ ಪುಸ್ತಕ ಸಹಕಾರಿಯಾಗುವಂತಿದೆ.
‘ಸಮನ್ವಯ ಕವಿ’ ಎಂದು ಗುರುತಿಸಲಾಗುವ ಚೆನ್ನವೀರ ಕಣವಿ ಅವರು ನವೋದಯ ಮತ್ತು ನವ್ಯ ಸಾಹಿತ್ಯಗಳೆರಡರಲ್ಲಿಯೂ ಸಕ್ರಿಯವಾಗಿ ಪಾಲುಗೊಂಡವರು. ಧಾರವಾಡ ಜಿಲ್ಲೆಯ ಹೊಂಬಳ ಗ್ರಾಮದಲ್ಲಿ 1928ರ ಜೂನ್ 28ರಂದು ಜನಿಸಿದರು. ತಂದೆ ಸಕ್ರಪ್ಪ- ತಾಯಿ ಪಾರ್ವತವ್ವ. ಶಿರುಂಡ, ಗರಗಗಳಲ್ಲಿ ಪ್ರಾಥಮಿಕ ಅಭ್ಯಾಸ ಮುಗಿಸಿದ ಮೇಲೆ ಧಾರವಾಡದ ಕರ್ನಾಟಕ ಕಾಲೇಜಿನಲ್ಲಿ ೧೯೫0ರಲ್ಲಿ ಬಿ.ಎ. ಪದವಿ (1950), ಕರ್ನಾಟಕ ವಿಶ್ವವಿದ್ಯಾಲಯದಿಂದ ಎಂ.ಎ.ಪದವಿ (1952) ಗಳಿಸಿದರು. ಕರ್ನಾಟಕದ ವಿಶ್ವವಿದ್ಯಾನಿಲಯದ ಪ್ರಸಾರಾಂಗದಲ್ಲಿ ಕಾರ್ಯದರ್ಶಿ (1952) ಯಾಗಿ ಸೇವೆ ಪ್ರಾರಂಭಿಸಿದ ಕಣವಿ ಅವರು ಅನಂತರ 1958ರಲ್ಲಿ ಅದರ ನಿರ್ದೇಶಕರಾದರು. ಹಲವಾರು ಪ್ರಶಸ್ತಿಗಳು ಕಣವಿ ಅವರ ಸಾಹಿತ್ಯ ...
READ MORE