ಲೇಖಕ ಡಾ.ವಿಜಯಕುಮಾರ ಜಿ ಪರುತೆ ಅವರು ಸಂಪಾದಿಸಿದ ಹಾಗೂ ವೀರಭದ್ರ ಸಿಂಪಿ ಅವರ ಪ್ರಧಾನ ಸಂಪಾದಕತ್ವದ ಕೃತಿ-ಸಾಧಕರ ಮನದಾಳದ ಮಾತು. ಕಲಬುರ್ಗಿ ಜಿಲ್ಲೆಯ ಹಲವು ಕ್ಷೇತ್ರಗಳಲ್ಲಿ ಸಾಧನೆಗೈದ ಸುಮಾರು 25 ಸಾಧಕರ ಜೊತೆ ಸಂವಾದ, ಮಾತುಕತೆ ಇದೆ. ಸಾಹಿತ್ಯ, ಸಂಗೀತ, ಚಿತ್ರಕಲೆ, ಕೃಷಿ, ಪತ್ರಿಕೋದ್ಯಮ,ಸೇವೆ, ರಂಗಭೂಮಿ, ವೈದ್ಯಕೀಯ, ನ್ಯಾಯಾಂಗ,ಹಾಗೂ ಸಮಾಜಸೇವೆ ಹೀಗೆ ವಿವಿಧ ವಲಯದ ಸಾಧಕರ ಅನುಭವ-ವಿಚಾರಗಳನ್ನು ದಾಖಲಿಸಲಾಗಿದೆ.
ಲೇಖಕ ಡಾ. ವಿಜಯಕುಮಾರ ಜಿ. ಪರುತೆ ಅವರು ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ಕಾಳಗಿಯವರು. ತಂದೆ ಗುರುಪಾದಪ್ಪ, ತಾಯಿ ಗುರು ಬಾಯಿ. ಕಾಳಗಿಯಲ್ಲಿ ಎಸ್ ಎಸ್ ಎಲ್ ಸಿ ಹಾಗೂ ನಂತರ ಬಿಎ ಪದವಿವರೆಗೆ ಕಲಬುರಗಿಯಲ್ಲಿ, ಗುಲಬರ್ಗಾ ವಿಶ್ವವಿದ್ಯಾಲಯದಿಂದ ಎಂ.ಎ (ಹಿಂದಿ) ಹಾಗೂ ಧಾರವಾಡದ ಕರ್ನಾಟಕ ವಿ.ವಿ.ಯಿಂದ ಎಂ.ಎ (ಕನ್ನಡ) ಪದವಿ ಪಡೆದರು. ಗುಲಬಗಾ ವಿವಿಯಿಂದ (2006) ಪಿಎಚ್ ಡಿ ಪಡೆದರು. ಕನ್ನಡ ಸಾಹಿತ್ಯ ಪರಿಷತ್ ಚಿಂಚೋಳಿ ತಾಲೂಕು (2001-08) ಅಧ್ಯಕ್ಷರಾಗಿ, ಕಲಬುರ್ಗಿ ಜಿಲ್ಲಾ ಕ.ಸಾ.ಪರಿಷತ್ತಿನ ಗೌರವ (2008-12) ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು. ಕಲಬುರಗಿಯ ಶರಣಬಸವೇಶ್ವರ ಮಹಾವಿದ್ಯಾಲಯದಲ್ಲಿ ತಾತ್ಕಾಲಿಕ ...
READ MORE