ಯೋಗ ಸಾಧಕ ವಿರೂಪಾಕ್ಷ ಬೆಳವಾಡಿ ಅವರ ಕೃತಿ-ಸಾಧನಗಳಿಂದ ಯೋಗ ಸಾಧನೆ. ಯೋಗ ಎಂಬುದು ದೈಹಿಕ ಕಸರತ್ತಲ್ಲ. ಅದು ಮನಸ್ಸಿನ ಮೇಲೆ ನಿಯಂತ್ರಣ ಸಾಧಿಸುವ ಒಂದು ಸಾಧನ ಕ್ರಮ. ಒಂದು ಶಿಸ್ತು. ಇದರಿಂದ, ದೇಹ ಹಾಗೂ ಮನಸ್ಸು ಎರಡೂ ಆರೋಗ್ಯಕಾರಿಯಾಗಿರುತ್ತವೆ. ಆದ್ದರಿಂದ, ಯೋಗ ಸಾಧನಗಳ ವೈವಿಧ್ಯತೆ ಆ ಮೂಲಕ ಸಾಧನೆ ಹೇಗೆ ಸಾಧ್ಯವಾಗುತ್ತದೆ ಎಂಬುದರ ಸ್ಥೂಲ ವಿವರಣೆ ನೀಡುವ ಕೃತಿ ಇದು. ಚಿತ್ರಸಮೇತ ಪಠ್ಯವೂ ಇರುವುದರಿಂದ ಓದುಗರ ಮೇಲೆ ಸಕಾರಾತ್ಮಕ ಪರಿಣಾಮ ಬೀರುತ್ತದೆ.
ವಿರೂಪಾಕ್ಷ ಬೆಳವಾಡಿ, ಚಿಕ್ಕಮಗಳೂರು ಜಿಲ್ಲೆ ಬೆಳವಾಡಿಯವರು. ಸುಮಾರು 25 ವರ್ಷಗಳಿಂದ ಯೋಗಕ್ಷೇತ್ರದಲ್ಲಿದ್ದು ನಾಡಿನಾದ್ಯಂತ ಯೋಗದ ಮೂಲಕ ಆರೋಗ್ಯವೃದ್ಧಿಗೆ ಶ್ರಮಿಸುತ್ತಿದ್ದಾರೆ. ಯೋಗಕ್ಷೇಮ ಎಂಬ ಸಂಸ್ಥೆಯ ಮೂಲಕ ಯೋಗ ಶಿಬಿರಗಳನ್ನು ನಡೆಸುತ್ತಿದ್ದು, ಸೂರ್ಯೋಪಾಸನೆ, ಸಂಸ್ಕಾರ ಸಿಂಚನ ,ಜನನಿ, ಸಾಧನಗಳೊಂದಿಗೆ ಯೋಗಸಾಧನೆ ಎಂಬ 7 ಕೃತಿಗಳನ್ನು ರಚಿಸಿದ್ದಾರೆ. ಸಾಹಿತ್ಯಲೋಕ ಪಬ್ಲಿಕೇಷನ್ಸ್‌ನಿಂದ ಸಾವಿರದ ಸತ್ಯ ,ಜನನಿ,ಆತ್ಮದರ್ಶನ ಎಂಬ 3 ಪುಸ್ತಕಗಳು ಪ್ರಕಟವಾಗಿವೆ. ವಿಜಯ ಕರ್ನಾಟಕ ಪತ್ರಿಕೆಯಲ್ಲಿ "ಡೈಲಿಯೋಗ" ಎಂಬ ಹೆಸರಿನ ಯೋಗಕ್ಕೆ ಸಂಬಂಧಿಸಿದಂತೆ 650ಕ್ಕೂ ಹೆಚ್ಚು ಅಂಕಣಗಳನ್ನು ಬರೆದಿದ್ದು, ಇವರ ಯೋಗಸಾಧನೆ ಗುರುತಿಸಿ 2018ರಲ್ಲಿ ಆರ್ಯಭಟ ಅಂತಾರಾಷ್ಟ್ರೀಯ ಪ್ರಶಸ್ತಿ ಹಾಗೂ ನಾಡ ಭೂಷಣ ಪ್ರಶಸ್ತಿ ಲಭಿಸಿದೆ. ...
READ MORE