ಸಾಹಿತಿ ಡಾ. ಬಸವರಾಜ ಸಬರದ ಅವರ ಕೃತಿ ಸಾಹಿತ್ಯ ಸಮನ್ವಯ. ಸಾಹಿತ್ಯದ ವೈವಿಧ್ಯಮಯ ಪ್ರಕಾರಗಳೊಂದಿಗಿನ ಸಮನ್ವಯವು ಸಂಶೋಧನ ಆಧ್ಯಯನಕ್ಕೆ ಹೇರಳ ಸಾಮಗ್ರಿ ಪೂರೈಸುತ್ತದೆ. ಮಾತ್ರವಲ್ಲ; ವಿವಿಧ ಜ್ಞಾನ ಶಾಖೆಗಳ ಅಂತರ್ ಶಿಸ್ತೀಯ ಅಧ್ಯಯನಕ್ಕೂ ಪೂರಕವಾಗುತ್ತದೆ. ಸಾಹಿತ್ಯ ಪ್ರಕಾರಗಳ ವೈವಿಧ್ಯಮಯ ಸ್ವರೂಪ-ಸ್ವಭಾವಗಳನ್ನು ತೌಲನಿಕವಾಗಿ ಅಧ್ಯಯನ ಮಾಡಲೂಬಹುದು. ಈ ನಿಟ್ಟಿನಲ್ಲಿ, ‘ಸಾಹಿತ್ಯ ಸಮನ್ವಯ’ ಕೃತಿಯು ಹೇರಳ ಸಾಮಗ್ರಿ ಒದಗಿಸುತ್ತದೆ.
ಬಸವರಾಜ ಸಬರದ ಅವರು ಮೂಲತಃ ಕೊಪ್ಪಳ ಜಿಲ್ಲೆ ಯಲಬುರ್ಗ ತಾಲ್ಲೂಕಿನ ಕುಕನೂರಿನವರು. ಹುಟ್ಟಿದ್ದು 1954 ಜೂನ್ 20ರಂದು. ತಾಯಿ ಬಸಮ್ಮ, ತಂದೆ ಬಸಪ್ಪ ಸಬರದ. ಹುಟ್ಟೂರು ಕುಕನೂರಿನಲ್ಲಿಯೇ ಪ್ರಾಥಮಿಕ ಶಿಕ್ಷಣ ಪಡೆದ ಇವರು ಕರ್ನಾಟಕ ವಿಶ್ವವಿದ್ಯಾಲಯದಿಂದ ಕನ್ನಡ ಭಾಷೆಯಲ್ಲಿ ಸ್ನಾತಕೋತ್ತರ ಪದವಿ ಹಾಗೂ ಪಿಎಚ್‌ಡಿ ಪದವಿ ಪಡೆದರು. ಉಪನ್ಯಾಸಕರಾಗಿ ವೃತ್ತಿ ಆರಂಭಿಸಿದ ಇವರು ಹಲವಾರು ಕಾಲೇಜುಗಳಲ್ಲಿ ಸೇವೆ ಸಲ್ಲಿಸಿದ್ದಾರೆ. ಶೈಕ್ಷಣಿಕವಾಗಿ ಮಾತ್ರವಲ್ಲದೇ ದೇವದಾಸಿ ವಿಮೋಚನಾ ಹೋರಾಟ, ಅಂತರ್ಜಾತಿ ವಿವಾಹಗಳಿಗೆ ಪ್ರೋತ್ಸಾಹ, ಅಸ್ಪೃಶ್ಯತಾ ನಿವಾರಣೆ, ದಲಿತ-ಬಂಡಾಯ ಚಳವಳಿ ಮುಂತಾದ ಸಾಮಾಜಿಕ ಹೋರಾಟಗಳಲ್ಲಿಯೂ ತೊಡಗಿಸಿಕೊಂಡಿದ್ದಾರೆ. ನನ್ನವರ ಹಾಡು, ಹೋರಾಟ, ...
READ MORE