ಶೂದ್ರಾತಿಶೂದ್ರರಿಗೆ ಸ್ವಂತ ಸಾಂಸ್ಕೃತಿಕ ಬದುಕೇ ಇರಲಿಲ್ಲ ಎಂಬ ವಿಕಲ್ಪವೂ ನೂರು ವರ್ಷ್ಗಳಷ್ಟು ಹಳೆಯದು. ಕೆಲವು ಬಗೆಯ ಅಧಿಕಾರ, ಯಜಮಾನಿಕೆ, ಆತ್ಮವಿಕಾಸಗಳ ಪರಿಕಲ್ಪನೆಗಳಿಂದ ರೂಪುಗೊಂಡ ಕೀಳರಿಮೆ ಇದು... ಮೂರು: ಶಿಷ್ಟ ಮತ್ತು ಜನಪ್ರಿಯಗಳೆಂಬ ವ್ಯತ್ಯಾಸಗಳು ಸದೃಢ ಮತ್ತು ಸಾರ್ವಕಾಲೀನ ಎಂಬ ಇನ್ನೊಂದು ವಿಕಲ್ಪವೂ ಕನ್ನಡ ಪ್ರತಿಭೆಗೆ ಸಾಕಷ್ಟು ಹಾನಿಮಾಡಿದೆ... ಇದಕ್ಕಿಂತ ಹೆಚ್ಚಾಗಿ, ಕನ್ನಡ ಚಿಂತನೆಯನ್ನು ಸೀಮಿತಗೊಳಿಸಿರುವ ಸಂಗತಿ ಎಂದರೆ ಆಧುನಿಕರಲ್ಲಿ ಜನಪ್ರಿಯ ಕಲಾರೂಪಗಳ ಬಗ್ಗೆ ಬೇರೂರಿರುವ ತಾತ್ಸಾರ... ನಮ್ಮ ಸಾಂಸ್ಕೃತಿಕ ಅಧ್ಯಯನದಲ್ಲಿ ಎಲ್ಲ ಬಗೆಯ ದ್ವೈತೀಯ ಕಲ್ಪನೆಗಳಿಂದ ಮುಕ್ತವಾಗಬೇಕಿದೆ. ಇದೇ ನಿಟ್ಟಿನಲ್ಲಿ ಡಿ.ಆರ್. ನಾಗರಾಜರ ಈ ವಿಮರ್ಶೆ ಮುಖ್ಯವಾದ ಕೃತಿಯಾಗಿದೆ.
ಕನ್ನಡದ ಖ್ಯಾತ ವಿಮರ್ಶಕ ಹಾಗೂ ಚಿಂತಕರಾದ ಡಾ.ಡಿ.ಆರ್.ನಾಗರಾಜು ಅವರು ಹುಟ್ಟಿದ್ದು ದೊಡ್ಡಬಳ್ಳಾಪುರದಲ್ಲಿ. ತಂದೆ ರಾಮಯ್ಯ, ತಾಯಿ ಅಕ್ಕಯ್ಯಮ್ಮ. ದೊಡ್ಡಬಳ್ಳಾಪುರದಲ್ಲಿ ಪ್ರಾಥಮಿಕ ಶಿಕ್ಷಣ ಮುಗಿಸಿದ ನಾಗರಾಜ್ ಪ್ರೌಢ ವ್ಯಾಸಂಗಕ್ಕಾಗಿ ಬೆಂಗಳೂರಿಗೆ ಬಂದರು. ಅಂದಿನ ಸರ್ಕಾರಿ ಆರ್ಟ್ಸ್ ಮತ್ತು ಸೈನ್ಸ್ ಕಾಲೇಜಿನ ವಿದ್ಯಾರ್ಥಿಯಾದ ಅವರು ಆನರ್ಸ್ ಪದವಿಯನ್ನು ಅಲ್ಲಿಯೇ ಪಡೆದರು. ಮುಂದೆ ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಎಂ.ಎ ಪದವಿ ಪಡೆದ ಡಿ.ಆರ್ ಸ್ವಲ್ಪ ಕಾಲ ಸಂಶೋಧಕ ವೃತ್ತಿಯಲ್ಲಿದ್ದು ಅಲ್ಲಿಯೇ ಕನ್ನಡ ಅಧ್ಯಾಪಕರಾದರು. ಪ್ರವಾಚಕರಾದರು, ಜೊತೆಗೆ ಕೈಲಾಸಂ ಪೀಠದ ಸಂದರ್ಶಕ ಪ್ರಾಧ್ಯಾಪಕರೂ ಆದರು. ಕನ್ನಡದ ವಿಮರ್ಶೆಗೆ ಸಾಂಸ್ಕೃತಿಕ ಆಯಾಮವನ್ನು ಒದಗಿಸಿದ ನಾಗರಾಜ್ ಅಮೆರಿಕದ ...
READ MORE