ಕವಿ ಗೋಕಾಕರು ಕನ್ನಡ ಮತ್ತು ಇಂಗ್ಲಿಷ್ ಸಾಹಿತ್ಯದಲ್ಲಿ ಪ್ರಮುಖ ಕೆಲಸ ಮಾಡಿದವರು. ಗೋಕಾಕರು ಕೇವಲ ಕವಿ ಮಾತ್ರ ಅಲ್ಲ. ಅವರ ಬರವಣಿಗೆಯು ಹಲವು ಪ್ರಕಾರಗಳಲ್ಲಿ ಹರಡಿದೆ. ಸೃಜನಶೀಲ ಕೃತಿಗಳು ಮಾತ್ರವಲ್ಲದೆ ವಿಮರ್ಶೆಯ ಕ್ಷೇತ್ರದಲ್ಲಿಯೂ ಅವರದು ಗಣನೀಯ ಕೊಡುಗೆ. ಸಾಹಿತ್ಯ ವಿಮರ್ಶೆಯ ತತ್ವಗಳನ್ನು ಕುರಿತು ಗೋಕಾಕರು ಈ ಗ್ರಂಥದಲ್ಲಿ ಚರ್ಚಿಸಿದ್ದಾರೆ. ವಿಮರ್ಶೆಯಲ್ಲಿ ಆಸಕ್ತರಾಗಿರುವವರು ಗಂಭೀರವಾಗಿ ಪರಿಗಣಿಸಬಹುದಾದ ಕೃತಿಯಿದು.
‘ವಿನಾಯಕ’ ಕಾವ್ಯನಾಮದಿಂದ ಕೃತಿಗಳ ರಚನೆ ಮಾಡಿರುವ ವಿನಾಯಕ ಕೃಷ್ಣ ಗೋಕಾಕ್ ಅವರು ಇಂಗ್ಲಿಷ್ ಮತ್ತು ಕನ್ನಡ ಸಾಹಿತ್ಯದಲ್ಲಿ ದೊಡ್ಡ ಹೆಸರು. ಕರ್ನಾಟಕದಿಂದ ಕೇಂದ್ರ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾಗಿದ್ದ ಮೊದಲ ವ್ಯಕ್ತಿ ಗೋಕಾಕ್ ಅವರು. ಭಾರತದಲ್ಲಿಯೇ ಅತ್ಯಂತ ಪ್ರತಿಷ್ಠಿತ ಲೇಖಕ-ಸಾಹಿತಿ ಅವರಾಗಿದ್ದರು. ಧಾರವಾಡ ಜಿಲ್ಲೆಯ (ಈಗಿನ ಹಾವೇರಿ) ಸವಣೂರಿನಲ್ಲಿ 1909ರ ಆಗಸ್ಟ್ 9ರಂದು ಜನಿಸಿದರು. ತಂದೆ ಕೃಷ್ಣರಾಯ ತಾಯಿ ಸುಂದರಮ್ಮ. ಸವಣೂರಿನಲ್ಲಿ ಶಾಲಾ ವಿದ್ಯಾಭ್ಯಾಸ ಮುಗಿಸಿ ಧಾರವಾಡದಲ್ಲಿ ಕರ್ನಾಟಕ ಕಾಲೇಜಿನಲ್ಲಿ ಬಿ.ಎ. ಪದವಿ ಪಡೆದು. ಪುಣೆಯ ಫರ್ಗ್ಯೂಸನ್ ಕಾಲೇಜಿನಲ್ಲಿ ಅನಂತರ ಆಕ್ಸ್‍ಫರ್ಡ್ ವಿಶ್ವವಿದ್ಯಾನಿಲಯದಲ್ಲಿ ಎಂ.ಎ. ಪದವಿ ಗಳಿಸಿದರು. ಉನ್ನತ ...
READ MORE