ದ. ರಾ. ಬೇಂದ್ರೆಯವರು ರಚಿಸಿರುವ ’ಸಖೀಗೀತ’ದಲ್ಲಿ ಬರುವಂತಹ ಋತುವರ್ಣನೆಯ ಬಗ್ಗೆ ಪ್ರಸ್ತಾಪಿಸಿ, ಪರಿಚಯಿಸುವ ಕೃತಿ ಇದು. ಬೇಂದ್ರೆಯವರ ಜನ್ಮ ದಿನಾಚರಣೆಯ ನಿಮಿತ್ತ ದಿನಾಂಕ 31-1-1994 ರಂದು ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಡಾ.ಸುಮತೀಂದ್ರ ನಾಡಿಗರು ಮಾಡಿದ ಭಾಷಣದ ಲಿಖಿತ ರೂಪವನ್ನು ಇಲ್ಲಿ ಸಂಪಾದಿಸಿ ಪ್ರಕಟಿಸಲಾಗಿದೆ.
ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲ್ಲೂಕಿನ ಕಳಸದವರಾದ ಸುಮತೀಂದ್ರ ನಾಡಿಗರು ಜನಿಸಿದ್ದು 1935ರ ಮೇ 4ರಂದು. ಇಂಗ್ಲಿಷ್ ಸಾಹಿತ್ಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದ ಡಾ. ಸುಮತೀಂದ್ರ ನಾಡಿಗ ಕಥೆ, ಕಾವ್ಯ, ವಿಮರ್ಶೆ, ಅನುವಾದ, ಮಕ್ಕಳ ಸಾಹಿತ್ಯ ಪ್ರಕಾರಗಳಲ್ಲಿ ಗಣನೀಯ ಸಾಧನೆ ಮಾಡಿದ್ದಾರೆ. ಕೃತಿಗಳು: ಸ್ಥಿತಪ್ರಜ್ಞ, ಗಿಳಿ ಮತ್ತು ದುಂಬಿ, ಕಾರ್ಕೋಟಕ, ಆಯ್ದ ಕಥೆಗಳು (ಕಥಾ ಸಂಕಲನಗಳು), ನಿಮ್ಮ ಪ್ರೇಮಕುಮಾರಿಯ ಜಾತಕ, ಕಪ್ಪುದೇವತೆ, ಉದ್ಘಾಟನೆ, ಭಾವಲೋಕ, ಇಂಪತ್ಯಗೀತೆ, ತಮಾಷೆ ಪದ್ಯಗಳು, ಕುಹೂಗೀತೆ, ನಟರಾಜ ಕಂಡ ಕಾಮನಬಿಲ್ಲು, ಸಮಗ್ರ ಕಾವ್ಯ, ಪಂಚಭೂತಗಳು, ಜಡ ಮತ್ತು ಚೇತನ (ಕವನ ಸಂಗ್ರಹಗಳು), ಅಡಿಗರ ಕಾವ್ಯ, ...
READ MORE