‘ಸಲ್ಲಾಪ’ ಲೇಖಕ ಎನ್.ಎಸ್. ಶ್ರೀಧರಮೂರ್ತಿ ಅವರ ಲೇಖನಗಳ ಸಂಕಲನ. ಇಲ್ಲಿಯ ಲೇಖನಗಳಲ್ಲಿ ಆಳವಾದ ವಿದ್ವತ್ತು, ಅಪರೂಪದ ಮಾಹಿತಿಗಳಿವೆ. ಹಲವು ಕ್ಷೇತ್ರಗಳ ಪರಿಚಯವಿರುವ ಅವರು ಸಾಹಿತ್ಯವನ್ನು ಕೇವಲ ಸ್ವರತಿಮಗ್ನ ಕಲೆ ಎಂದು ತಿಳಿಯದೇ, ಅದರ ಸೈದ್ಧಾಂತಿಕ, ಸಾಮಾಜಿಕ ಮತ್ತು ರಾಜಕೀಯ ನೆಲೆಗಳನ್ನು ಹಿಡಿಯುವ ಪ್ರಯತ್ನ ಮಾಡಿದ್ದಾರೆ. ಪ್ರತೀ ಲೇಖನಕ್ಕೂ ಅಪರೂಪದ ತಯಾರಿ ಮತ್ತು ಆಸಕ್ತಿವಹಿಸುವ ಶ್ರೀಧರಮೂರ್ತಿ ಅವರ ಬರಹದ ಶೈಲಿ ಈ ಕೃತಿಯಲ್ಲಿ ಹೆಚ್ಚು ಗಮನ ಸೆಳೆಯುತ್ತದೆ.
ಎನ್.ಎಸ್.ಶ್ರೀಧರಮೂರ್ತಿ ಮಂಗಳೂರು ವಿಶ್ವವಿದ್ಯಾಲಯದಿಂದ ಅರ್ಥಶಾಸ್ತ್ರದಲ್ಲಿ ಚಿನ್ನದ ಪದಕ ಮತ್ತು ರ್‍ಯಾಂಕ್ ನೊಂದಿಗೆ ಸ್ನಾತಕೋತ್ತರ ಪದವಿಯನ್ನು ಪಡೆದವರು. ಉಪನ್ಯಾಸಕರಾಗಿ ತಮ್ಮ ವೃತ್ತಿಜೀವನವನ್ನು ಆರಂಭಿಸಿದ ಇವರು 'ಮಲ್ಲಿಗೆ' ಮಾಸಪತ್ರಿಕೆಯ ಮೂಲಕ ಪತ್ರಿಕೋದ್ಯಮಕ್ಕೆ ಬಂದು ಕಳೆದ ಎರಡು ದಶಕದಿಂದ ಸಾಂಸ್ಕೃತಿಕ ಪತ್ರಿಕೋದ್ಯಮವನ್ನು ಉಳಿಸುವಲ್ಲಿ ವಿವಿಧ ಪತ್ರಿಕೆಗಳ ಮೂಲಕ ಶ್ರಮಿಸುತ್ತಿದ್ದಾರೆ. ಚಲನಚಿತ್ರ ಇತಿಹಾಸದ ಕುರಿತು ಆಳವಾದ ಅಧ್ಯಯನ ನಡೆಸಿದ್ದಾರೆ. ಇವರು ಸಾಹಿತ್ಯ ಮತ್ತು ಆಧ್ಯಾತ್ಮ ಕ್ಷೇತ್ರದಲ್ಲಿಯೂ ಕೆಲಸ ಮಾಡಿದ್ದಾರೆ. ‘ಸಿಂಹಾವಲೋಕನ, ನಗುವ ನಯನ ಮಧುರ ಮೌನ, ಮಂಜುಳಾ ಎಂಬ ಎಂದೆಂದೂ ಮರೆಯದ ಹಾಡು, ಸಾಹಿತ್ಯ ಸಂವಾದ, ಹಾಡು ಮುಗಿಯುವುದಿಲ್ಲ, ಸಿನಿಮಾ ಎನ್ನುವ ನಾಳೆ’ ಅವರ ಪ್ರಮುಖ ಕೃತಿಗಳು. ಕನ್ನಡ ಚಿತ್ರಗೀತೆಗಳ ಸಾಂಸ್ಕೃತಿಕ ...
READ MORE