ಸಮಾನತೆಯ ಸಂಚಲನ ನಾರಾಯಣ ಗುರು-ಕೃತಿಯನ್ನು ಲೇಖಕ ಅರವಿಂದ ಚೊಕ್ಕಾಡಿ ಅವರು ಬರೆದಿದ್ದಾರೆ. ಸಮಾಜದ ತಾರತಮ್ಯಗಳನ್ನು ಹೋಗಲಾಡಿಸಲು ತಮ್ಮಿಡೀ ಜೀವನವನ್ನು ಮುಡಿಪಾಗಿಟ್ಟ ನಾರಾಯಣ ಗುರುಗಳ ಜೀವನ ಚಿತ್ರಣ ಇದರಲ್ಲಿದ್ದು ಅವರ ಜನನ, ಬಾಲ್ಯ ಮತ್ತು ಸಮಾಜ ಸೇವೆ ಅದ್ವೈತ ಆಶ್ರಮ, ಅವರು ಕೈಗೊಂಡ ಸಾಮಾಜಿಕ ಸುಧಾರಣೆಗಳ ಸಂಪೂರ್ಣ ವಿವರವನ್ನು ಲೇಖಕರು ಈ ಪುಸ್ತಕದಲ್ಲಿ ವಿವರಿಸಿದ್ದಾರೆ.
ಅರವಿಂದ ಚೊಕ್ಕಾಡಿ ಅವರು 1975ರ ಡಿಸೆಂಬರ್ 21ರಂದು ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ತಾಲೂಕಿನ ಪಾಲ್ತಾಡಿ ಗ್ರಾಮದ ಮಾಲೆತ್ತೋಡಿ ಎಂಬಲ್ಲಿ ಜನಿಸಿದರು. ತಂದೆ ಕುಕ್ಕೆಮನೆ ವೆಂಕಟ್ರಮಣಯ್ಯ ಗೋಪಾಲ ಶರ್ಮ. ತಾಯಿ ಪಾರ್ವತಿ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣವನ್ನು ಚಕ್ಕಾಡಿಯಲ್ಲಿ ಮುಗಿಸಿ ಪದವಿ ಪೂರ್ವ ಮತ್ತು ಬಿ.ಎ ಪದವಿಯನ್ನು ಸುಳ್ಯದ ನೆಕರೂ ಮೆಮೋರಿಯಲ್ ಕಾಲೇಜಿನಲ್ಲಿ ಪಡೆದರು. ಮಂಗಳೂರಿನ ಶಿಕ್ಷಕ ಶಿಕ್ಷಣ ಮಹಾ ವಿದ್ಯಾಲಯದಿಂದ ಬಿ. ಇಡ್. ಪದವೀಧರರಾಗಿರುವ ಇವರು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಿಂದ ಇತಿಹಾಸದಲ್ಲಿ ಎಂ. ಎ ಪದವಿ ಪಡೆದರು. 2011 ರಿಂದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ...
READ MORE