ಸಮಾರಾಧನ-ವಿಮರ್ಶಕ ಜಿ.ಎಸ್. ಆಮೂರರ ಕೃತಿ- ನಾಟಕಗಳನ್ನು ವಿಮರ್ಶೆಗೆ ಒಳಪಡಿಸಲಾಗಿದೆ. ಜೊತೆಗೆ, ಕನ್ನಡದ ನಾಟಕಕಾರರು, ನಾಟಕ ಕೃತಿಗಳು, ವೃತ್ತಿ ಹಾಗೂ ಹವ್ಯಾಸಿ ನಾಟಕಗಳು, ರಂಗಭೂಮಿ ಹೀಗೆ ವಿವಿಧ ಅಧ್ಯಾಯಗಳು ಕನ್ನಡ ನಾಟಕ ರಂಗದ ಅಗಾಧ ಪರಿಚಯ ನೀಡುತ್ತದೆ. .ಈ ಕೃತಿಯು 2005 ಹಾಗೂ 2015 ರಲ್ಲಿ ಮುದ್ರಣ ಕಂಡಿತ್ತು.
ಕನ್ನಡ ಸಾಹಿತ್ಯವನ್ನು ಇಂಗ್ಲಿಷ್ ಮೂಲಕ ಇತರ ಭಾಷಾ ಜಗತ್ತಿಗೆ ಪರಿಚಯಿಸುತ್ತಾ, ವಿಮರ್ಶಾಲೋಕದಲ್ಲಿ ಕನ್ನಡ-ಇಂಗ್ಲಿಷ್ ಕೃತಿಗಳನ್ನು ವಿಮರ್ಶಿಸುತ್ತಾ, ಮಹತ್ತರ ಪಾತ್ರ ವಹಿಸುತ್ತಾ ಬಂದಿರುವ ಗುರುರಾಜ ಶಾಮಾಚಾರ್ಯ ಆಮೂರರು ಹುಟ್ಟಿದ್ದು ಹಾವೇರಿ ಜಿಲ್ಲೆಯ ಹಾನಗಲ್ ತಾಲ್ಲೂಕಿನ ಬೊಮ್ಮನಹಳ್ಳಿಯಲ್ಲಿ. ತಂದೆ ಶಾಮಾಚಾರ್ಯರು, ತಾಯಿ ಗಂಗಾದೇವಿ. ತಂದೆಗೆ ಸಂಗೀತ, ಸಾಹಿತ್ಯದಲ್ಲಿ ಆಸಕ್ತಿ. ಪ್ರಾರಂಭಿಕ ಶಿಕ್ಷಣ ಸೂರಣಗಿಯಲ್ಲಿ (ಈಗ ಶಿರಹಟ್ಟಿ ತಾಲ್ಲೂಕು, ಗದಗ ಜಿಲ್ಲಾ) ಹೈಸ್ಕೂಲು ವಿದ್ಯಾಭ್ಯಾಸ ಹಾವೇರಿಯಲ್ಲಿ. ಶಿಕ್ಷಕರಾಗಿ ದೊರೆತ ಹುಚ್ಚೂರಾವ್ ಬೆಂಗೇರಿ ಮಾಸ್ತರು ಕನ್ನಡದಲ್ಲಿ ಆಸಕ್ತಿ ಬೆಳೆಯುವಂತೆ ಮೂಡಿದರೆ, ಎಸ್.ಜಿ. ಗುತ್ತಲ ಮಾಸ್ತರು ಇಂಗ್ಲಿಷ್ ಸಾಹಿತ್ಯದ ಬಗ್ಗೆ ಆಸಕ್ತಿ ಮೂಡುವಂತೆ ಮಾಡಿದರು. ಧಾರವಾಡದ ...
READ MORE