ಸಮಸ್ಯೆ ಇಲ್ಲದವರು ಯಾರಿದ್ದಾರೆ ಹೇಳಿ? ಪ್ರತಿಯೊಬ್ಬರೂ ಒಂದಿಲ್ಲೊಂದು ಸಮಸ್ಯೆ ಎಂಬ ಗೋಜಲಿನೊಳಗೆ ಸಿಲುಕಿರುವವರೇ ಆಗಿರುತ್ತಾರೆ. ಆದರೆ ಕೆಲವರು ಇದನ್ನು ನಿಭಾಯಿಸಲು ಸಾಧ್ಯವಾಗದೇ ಸಾವಿನತ್ತ ಮುಖಮಾಡುತ್ತಾರೆ. ಕೆಲವರಿಗೆ ಆಪ್ತ ಸಮಾಲೋಚನೆ ಸಹಾಯ ದೊರೆತು, ಅದರಿಂದ ಹೊರ ಬಂದು, ನೆಮ್ಮದಿಯ ಬದುಕು ಸಾಗಿಸುತ್ತಾರೆ. ಇಂತಹ ಗೊಂದಲಕ್ಕೆ ಒಳಗಾದವರ, ವಿವಿಧ ಸಾಮಾಜಿಕ, ಆರ್ಥಿಕ, ಸಾಂಸ್ಕೃತಿಕ ಭಿನ್ನ ವರ್ಗಗಳ ಜನರ ಬದುಕಿನ ಕಥನಗಳನ್ನು ಡಾ. ಸಿ.ಆರ್. ಚಂದ್ರಶೇಖರ ಅವರು ಈ ಕೃತಿಯಲ್ಲಿ ಕಟ್ಟಿಕೊಟ್ಟಿದ್ದಾರೆ.
ಡಾ. ಸಿ.ಆರ್. ಚಂದ್ರಶೇಖರ್ ಅಂತಾರಾಷ್ಟ್ರೀಯ ಖ್ಯಾತಿ ಪಡೆದಿರುವ ರಾಷ್ಟ್ರೀಯ ಮನೋರೋಗ ಮತ್ತು ನರವಿಜ್ಞಾನ ಸಂಸ್ಥೆಯಲ್ಲಿ ಉಪ ಆರೋಗ್ಯ ಅಧೀಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಮನೋವಿಜ್ಞಾನ ಕ್ಷೇತ್ರದಲ್ಲಿ ಸಾಮಾಜಿಕ ಕಳಕಳಿಯುಳ್ಳ ಹಿರಿಯ ವೈದ್ಯರು ರೋಗಿಗಳ ಶುಶ್ರೂಷೆ, ಬೋಧನೆ ಮತ್ತು ತರಬೇತಿ ನೀಡುತ್ತಿರುವುದರ ಜೊತೆಗೆ ಕಳೆದ 30 ವರ್ಷಗಳಿಂದ ನಿರಂತರ ಸೇವೆ ಸಲ್ಲಿಸುತ್ತಿದ್ದಾರೆ. 150 ಕ್ಕೂ ಹೆಚ್ಚು ಮನೋವಿಜ್ಞಾನದ ಬಗ್ಗೆ ಕನ್ನಡದಲ್ಲಿ ರಚಿಸಿರುವ ಇವರ ಹಲವು ಪುಸ್ತಕಗಳು ತೆಲುಗು, ಉರ್ದು, ಗುಜರಾತಿ, ಹಿಂದಿ ಭಾಷೆಗಳಿಗೆ ಅನುವಾದಗೊಂಡಿವೆ. 1000 ಕ್ಕೂ ಹೆಚ್ಚು ಪ್ರೌಢ ಲೇಖನಗಳನ್ನು ಬರೆದಿದ್ದಾರೆ. ...
READ MORE