ಲೇಖಕ ಡಾ. ಬೆ.ಗೋ. ರಮೇಶ್ ಅವರು ಕನ್ನಡ ಚಲನ ಚಿತ್ರ ನಟ ಪುನೀತ್ ರಾಜಕುಮಾರ್ ಅವರ ಜೀವನ ಸಾಧನೆ ಕುರಿತು ಬರೆದ ಕೃತಿ-ಸಾಮಾಜಿಕ ಚಿಂತನೆಯ ಪವರ್ ಸ್ಟಾರ್ ಪುನೀತ್ ರಾಜಕುಮಾರ್. ಸಮಾಜ ಸೇವೆಯ ಅದಮ್ಯ ಉತ್ಸಾಹ ಇಟ್ಟುಕೊಂಡು ಚಲನಚಿತ್ರಗಳಲ್ಲಿ ನಡಟಿಸುತ್ತಾ ಅಸಂಖ್ಯ ಅಭಿಮಾನಿಗಳನ್ನು ಪಡೆದಿದ್ದ ಪುನೀತ್ ರಾಜಕುಮಾರ್ ಅವರು, ನಟನಾ ಕೌಶಲದಿಂದ ಹಾಗೂ ಸಮಾಜ ಸೇವೆ ಹೀಗೆ ಎರಡೂ ಕ್ಷೇತ್ರಗಳಲ್ಲಿ ತಮ್ಮಸೇವಾ ಕಳಕಳಿಯನ್ನುತೋರಿದ್ದರು. ಇಂತಹ ವ್ಯಕ್ತಿತ್ವದ ಪುನೀತ್ ರಾಜಕುಮಾರ್ ಅವರು ಏಕಾಏಕಿಯಾಗಿ ಹೃದಯಾಘಾತದಿಂದ ಸಾವನ್ನಪ್ಪಿದ್ದು, ಚಲನಚಿತ್ರ ರಂಗ ಹಾಗೂ ಸಮಾಜ ಸೇವಾಕ್ಷೇತ್ರ ಸಾಕಷ್ಟು ಹಾನಿ ಅನುಭವಿಸಿದೆ. ಈ ಕುರಿತು ಸಾಧನೆಯ ಸಂಕ್ಷಿಪ್ತ ಚಿತ್ರಣ ನೀಡುವ ಕೃತಿ ಇದು.
ಬೆ.ಗೋ. ರಮೇಶ್ ಮೈಸೂರು ಜಿಲ್ಲೆಯ ಕೆ.ಆರ್. ನಗರ ತಾಲ್ಲೂಕಿನ ದೊಡ್ಡ ಹನಸಗೆಯಲ್ಲಿ ಆಗಸ್ಟ್ 22 , 1945ರಲ್ಲಿ ಜನಿಸಿದರು. ತಂದೆ ಗೊವಿಂದರಾಜು, ತಾಯಿ ರಾಧಮ್ಮನವರು. ಅವರ ಪ್ರಾರಂಭಿಕ ಶಿಕ್ಷಣ ನಡೆದದ್ದು ಬೆಂಗಳೂರಿನ ಮಲ್ಲೇಶ್ವರಂ ಶಾಲೆಯಲ್ಲಿ. ಇಂಟರ್‌ಮೀಡಿಯೆಟ್ ಓದಿದ್ದು ಸರಕಾರಿ ಕಾಲೇಜಿನಲ್ಲಿ. ಮುಂದೆ ರಮೇಶರು ಹಾಸನದ ಮಲ್ನಾಡ್ ಎಂಜನಿಯರಿಂಗ್ ಕಾಲೇಜಿನಿಂದ ಬಿ.ಇ. ಪದವಿ ಪಡೆದರು. ಹೆಬ್ಬಾಳದ ಕೃಷಿ ವಿಶ್ವವಿದ್ಯಾಲಯದಲ್ಲಿ ಕೆಲಕಾಲ ಉದ್ಯೋಗ ನಿರ್ವಹಿಸಿದ ಬೆ. ಗೋ ರಮೇಶರು ಕರ್ನಾಟಕ ಪವರ್ ಕಾರ್ಪೋರೇಷನ್ನಿನಲ್ಲಿ ಸಹಾಯಕ ಎಂಜನಿಯರಾಗಿ, ಸಹಾಯಕ ಎಕ್ಸುಕ್ಯುಟಿವ್ ಎಂಜನಿಯರಾಗಿ, ಎಕ್ಸಿಕ್ಯುಟಿವ್ ಎಂಜನಿಯರಾಗಿ, ರಾಯಚೂರಿನ ಶಾಕೋತ್ಪನ್ನ ವಿದ್ಯುದಾಗಾರದಲ್ಲಿ ಸೇವೆ ಸಲ್ಲಿಸಿ ...
READ MORE