ಲೇಖಕ, ಚಿಂತಕ ಡಾ. ವಿ. ಮುನಿವೆಂಕಟಪ್ಪ ಅವರ ಕೃತಿ-ಸಾಮಾಜಿಕ ದಾರ್ಶನಿಕರು. ‘ಬಹುಜನ ಹಿತಾಯ’ ಕ್ಕಾಗಿ ಬಹಳಷ್ಟು ಜನ ನಾಯಕರು ಜಾತಿ ವ್ಯವಸ್ಥೆಯನ್ನು ವಿರೋಧಿಸಿದ್ದಾರೆ. ಈ ಬಗ್ಗೆ ಜನಜಾಗೃತಿ ಮೂಡಿಸಿದ್ದಾರೆ. ಸಮಾನತೆಯ ಸಮಾಜ ನಿರ್ಮಾಣದ ಗುರಿ ಅವರದಾಗಿತ್ತು. ಬುದ್ಧ-ಬಸವ,-ಅಂಬೇಡ್ಕರ್, ಶಾಹು ಮಹಾರಾಜ, ನಾರಾಯಣ ಗುರು, ವಿಶ್ವೇಶ್ವರಯ್ಯ, ಏಸುಕ್ರಿಸ್ತ ಮುಂತಾದವರ ಜೀವನಚಿತ್ರವನ್ನು ಚಿತ್ರಿಸುವ ಮೂಲಕ ಅವರ ವಿಚಾರಗಳಿಗೆ ಪ್ರಾಮುಖ್ಯತೆ ನೀಡಿದ ಕೃತಿ ಇದು.
ಲೇಖಕ, ಚಿಂತಕ ವಿ. ಮುನಿವೆಂಕಟಪ್ಪ ಅವರು ಸೈದ್ಧಾಂತಿಕ ಬದ್ಧತೆಯನ್ನು ಉಸಿರಾಗಿಸಿಕೊಂಡವರು. ಕೋಲಾರ ತಾಲೂಕಿನ ಎಡಹಳ್ಳಿಯವರು. ಕೃತಿಗಳು: ಮಹಿಳಾ ಸಬಲೀಕರಣ, ದಲಿತ ಚಳವಳಿ: ಒಂದು ಅವಲೋಕನ, ಸಾಮಾಜಿಕ ದಾರ್ಶನಿಕರು, ವಿಶ್ವಚೇತನ ಬುದ್ಧ, ಮಹಾ ಮಾನವ ಬುದ್ಧ, ಮಹಾಮಾನವ ಬಸವಣ್ಣ, ಶರಣಧರ್ಮ ಚರಿತ್ರೆ, ದಲಿತ ಚಳವಳಿ ಮತ್ತು ಇತರೆ ಲೇಖನಗಳು ಬಹುಜನ ಭಾರತ, ಬಹುಜನ ಚಳವಳಿ, ಬಹುಜನ ಸಮಾಜ, ಅಂಬೇಡ್ಕರ ಪರಿಕಲ್ಪನೆ ಹೀಗೆ ಹತ್ತು ಹಲವು ಕೃತಿಗಳ ಮೂಲಕ ಓದುಗರ ಸ್ವಾಭಿಮಾನವನ್ನು ಬಡಿದೆಬ್ಬಿಸುತ್ತಾರೆ. ದಲಿತ ಚಳವಳಿ ನಡೆದು ಬಂದ ದಾರಿಯ ಚರಿತ್ರೆಯನ್ನು ಸುಮಾರು 17 ಸಂಪುಟಗಳಲ್ಲಿ ದಾಖಲಿಸಿದ್ದು ಇವರ ಓದಿನ ...
READ MORE