ಲಕ್ಷ್ಮೀಶ ತೋಳ್ಪಾಡಿ
ಲಕ್ಷ್ಮೀಶ ತೋಳ್ವಾಡಿ ಕೃಷಿಕ, ಚಿಂತಕ ಮತ್ತು ವಿದ್ವಾಂಸರು. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಬಳಿಯ ಶಾಂತಿಗೋಡು ಗ್ರಾಮದವರು. ಇವರದು ತೋಳ್ಳಾಡಿತ್ತಾಯ ವೈದಿಕ ಮನೆತನ, ಉತ್ತುಬಿತ್ತು ಗೇಯುವ ಕಾಯಕ. ಆಡುಭಾಷೆ ತುಳು. ವೈದಿಕ ಮತ್ತು ವೈಚಾರಿಕ ನಿಲುವುಗಳನ್ನು ಪರಸ್ಪರ ಮುಖಾಮುಖಿಯಾಗಿಸಿದರು. ತಾರುಣ್ಯದಲ್ಲಿ ಕೆಲ ಕಾಲ ಬೆಂಗಳೂರಿನಲ್ಲಿದ್ದರು. ವೈ.ಎನ್.ಕೆ, ಗೋಪಾಲಕೃಷ್ಣ ಅಡಿಗ, ಲಂಕೇಶ ಪತ್ರಿಕೆ, ಕಿ.ರಂ. ನಾಗರಾಜ ಅವರ ಒಡನಾಟ ಸಿಕ್ಕಿತ್ತು. ಭಕ್ತಿ-ವಿಭಕ್ತಿಗಳ ನಡುವಿನ ಆಧ್ಯಾತ್ಮಿಕ ವ್ಯಾಕರಣದ ಹುಡುಕಾಟ ತೀವ್ರಗೊಂಡು ಶಿವಮೊಗ್ಗಕ್ಕೆ ತೆರಳಿದಾಗ ಅಲ್ಲಿ ಸತ್ಯಕಾಮರ ಒಡನಾಟ ದಕ್ಕಿತು. ಪುತ್ತೂರಿನ ಅಜ್ಜನ ಸಾಧನೆಯ ಗವಿಯೊಳಗೆ ಕಂಡ ಬೆಳಕು ಕೆಲಕಾಲ ಇವರನ್ನು ಕೈಹಿಡಿದು ನಡೆಸಿತು. ಬುದ್ಧ, ಗಾಂಧಿಯವರ ಮಧ್ಯಮ ...
READ MORE