ಪ್ರೊ. ಮಲೆಯೂರು ಗುರುಸ್ವಾಮಿ ಅವರು ರಂಗಕರ್ಮಿ ಸಂಸ ಅವರ ಕುರಿತು ಬರೆದ ಕಾದಂಬರಿ-ಸಂಸ. ಕಥಾವಸ್ತು, ನಿರೂಪಣಾ ಶೈಲಿ, ಪಾತ್ರಗಳ ಸೃಷ್ಟಿ, ಸನ್ನಿವೇಶಗಳ ಜೋಡಣೆ, ಪರಿಣಾಮಕಾರಿ ಸಂಭಾಷಣೆ ಇತ್ಯಾದಿ ಸಾಹಿತ್ಯಕ ಅಂಶಗಳಿಂದ ಈ ಕಾದಂಬರಿಯು ಓದುಗರ ಗಮನ ಸೆಳೆಯುತ್ತದೆ.
ಚಾಮರಾಜನಗರ ತಾಲೂಕಿನ ಮಲೆಯೂರು ಗ್ರಾಮದಲ್ಲಿ ಪ್ರೊ.ಮಲೆಯೂರು ಗುರುಸ್ವಾಮಿ ಅವರು 1947ರ ಆಗಸ್ಟ್ 1ರಂದು ಜನಿಸಿದರು. ತಂದೆ ಶಿವಣ್ಣ, ತಾಯಿ ಮರೆಮ್ಮ. ಪ್ರಸ್ತುತ ಮೈಸೂರಿನ ಹಿನಕಲ್‌ನ ಆಶ್ರಮ ರಸ್ತೆಯ ಮಹಾಮನೆಯಲ್ಲಿ ವಾಸ. ಜೆಎಸ್‌ಎಸ್ ಸಂಸ್ಥೆಯಲ್ಲಿ ವಿಶ್ರಾಂತ ಕನ್ನಡ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ. ಗುರುಸ್ವಾಮಿ ಅವರ ಸೃಜನಶೀಲ ಕೃತಿಗಳಾದ ಮಹಾಯಾತ್ರಿಕ, ಅಪ್ರತಿಮವೀರ, ಚರಿತ್ರೆಯ ಪುಟಕ್ಕೆ ಒಂದು ಟಿಪ್ಪಣಿ ಕಾದಂಬರಿಗಳು, ಮಾತೆಂಬುದು ಜ್ಯೋತಿರ್ಲಿಂಗ ವಚನ ಸಾಹಿತ್ಯ, ಶ್ರೀ ಕಾರ್ಯಸ್ವಾಮಿ ಮಠದ ಕ್ಷೇತ್ರ ಚರಿತ್ರೆ, ಶರಣ ಕಿರಣ ವ್ಯಕ್ತಿ ಚಿತ್ರ, ಪ್ರಭುಲಿಂಗ ಲೀಲೆ ವಿಮರ್ಶಾ ಕೃತಿಗಳನ್ನು ರಚಿಸಿದ್ದಾರೆ. ಮೂಡಲ ಸೀಮೆಯ ಕಥೆಗಳು, ಕಾಡಂಚಿನ ಕೋಗಿಲೆಗಳ ಕಲರವ, ಕಪಿಲಾ ...
READ MORE