ಕೌಂಟ್ ಲಿಯೋ ಟಾಲಸ್ಟಾಯಿ ಅವರು ಬರೆದ ನೀಳ್ಗತೆಗಳನ್ನು ಹೆಸರಾಂತ ಸಾಹಿತಿ ಡಾ. ಪಿ.ವಿ. ನಾರಾಯಣ ಅವರು ‘ಸಂಸಾರ ಸುಖ’ ಶೀರ್ಷಿಕೆಯಡಿ ಕನ್ನಡಕ್ಕೆ ಅನುವಾದಿಸಿದ್ದಾರೆ. ಈ ಸಂಕಲನದಲ್ಲಿ ಸಂಸಾರ ಸುಖ, ಕ್ರೂಸರ್ ಸೊನಾಟ, ಯಜಮಾನ ಆಳು ಹಾಗೂ ಫಾದರ್ ಸರ್ಜಿಯಸ್-ಶಿರ್ಷಿಕೆಯ ಕಥೆಗಳಿವೆ. ಸಾಮಾಜಿಕ ಅನಿಷ್ಟಗಳ ವಿರುದ್ಧ ವೈಚಾರಿಕೆ ಮೂಡಿಸುವುದು ಇಲ್ಲಿಯ ಕಥೆಗಳ ಉದ್ದೇಶ. ಪ್ರತಿ ಕಥೆಯಲ್ಲೂ ಮಾನವೀಯತೆ ಮಿಡಿದಿದೆ. ಕಾವ್ಯಾಂಶ ಜಿನುಗಿದೆ.
ಡಾ. ಪಿ. ವಿ. ನಾರಾಯಣ, ಬೆಂಗಳೂರಿನ ವಿಜಯಾ ಕಾಲೇಜಿನಲ್ಲಿ ಕನ್ನಡ ಪ್ರವಾಚಕರಾಗಿದ್ದರು. ತಂದೆ ಪಿ.ವೆಂಕಪ್ಪಯ್ಯ, ತಾಯಿ ನರಸಮ್ಮ. ಬೆಂಗಳೂರಿನಲ್ಲಿ 1942ರ ಡಿ.18 ರಂದು ಹುಟ್ಟಿದರು. ಮೈಸೂರು ವಿಶ್ವವಿದ್ಯಾಲಯದಿಂದ ಎಂ.ಎ. (ಕನ್ನಡ) ಕರ್ನಾಟಕ ವಿಶ್ವವಿದ್ಯಾಲಯದಿಂದ ಎಂ.ಎ. (ಇಂಗ್ಲಿಷ್), “ವಚನ ಸಾಹಿತ್ಯ: ಒಂದು ಸಾಂಸ್ಕೃತಿಕ ಅಧ್ಯಯನ” ಮಹಾಪ್ರಬಂಧಕ್ಕೆ ಬೆಂಗಳೂರು ವಿಶ್ವವಿದ್ಯಾಲಯದಿಂದ ಪಿಎಚ್.ಡಿ. ಪಡೆದಿದ್ದಾರೆ.. ವಿಮರ್ಶೆ/ಸಂಶೋಧನೆ-ಬಳ್ಳಿಗಾವೆ, ಕಾಯತತ್ತ್ವ, ಚಂಪೂಕವಿಗಳು, ವಚನ ಚಳವಳಿ, ವಚನ ವ್ಯಾಸಂಗ ಮೊದಲಾದ 16ಕೃತಿಗಳು. ಸಂಪಾದಿತ-ಬಸವ ಪುರಾಣ ಸಂಗ್ರಹ, ಪದ್ಮಿನೀ ಪರಿಣಯ ಮೊದಲಾದ 5 ಕೃತಿಗಳು. ಅನುವಾದ-ಮದುವೆ ಮತ್ತು ನೀತಿ, ಹನ್ನೆರಡನೇ ರಾತ್ರಿ, ಅಶ್ವತ್ಥಾಮನ್, ಬುವಿಯ ಬಸಿರಿಗೆ ಪಯಣ, ಪಂಪ ರಾಮಾಯಣ ಮುಂತಾದ 12 ಕೃತಿಗಳು. ಕಾದಂಬರಿಗಳು-ಸಾಮಾನ್ಯ, ...
READ MORE