ಕೆಲಸದಲ್ಲಿ ಅಭ್ಯರ್ಥಿಯ ವ್ಯಕ್ತಿತ್ವದ ಸಮಗ್ರ ದರ್ಶನವಾಗುವುದು ಸಂದರ್ಶನದ ಸಂದರ್ಭದಲ್ಲಿ. ಗಾಬರಿ ಬೀಳದೆ, ಸಮಚಿತ್ತದಿಂದ ಸಂದರ್ಶನ ಎದುರಿಸುವುದು ಹೇಗೆ ? ಆಗ ಶಾರೀರಿಕ ತೊರಿಕೆ ಹೇಗಿರಬೇಕು? ಸಂದರ್ಶನಗಳು ಹೇಗಿರುತ್ತವೆ? - ಮುಂತಾದವುಗಳ ಕುರಿತು ಲೇಖಕ ಬೇದ್ರೆ ಮಂಜುನಾಥ ಅವರು ಮಾಹಿತಿ ನೀಡಿದ್ದಾರೆ. ಸಂದರ್ಶನವನ್ನು ಎದುರಿಸಲು ಈ ಕೃತಿ ಉತ್ತಮ ಕೈಪಿಡಿ.
ಲೇಖಕ, ಚಿಂತಕ, ಅಂಕಣಕಾರರಾದ ಬೇದ್ರೆ ಮಂಜುನಾಥ್ ಮೂಲತಃ ಶಿವಮೊಗ್ಗದವರು, 10-06-1967ರಲ್ಲಿ ಕಡುಬಡತನದ ಕುಟುಂಬದಲ್ಲಿ ಹುಟ್ಟಿದ ಮಂಜುನಾಥ್ ಸದಾ ಕ್ರಿಯಾಶೀಲ ವ್ಯಕ್ತಿ. ತಮ್ಮ ಸ್ವ-ಪರಿಶ್ರಮದಿಂದಲೇ ಬೆಳೆದಿರುವ ಅವರು ಈ ವರೆಗೂ 50ಕ್ಕಿಂತಲೂ ಹೆಚ್ಚಿನ ಪುಸ್ತಕಗಳನ್ನು ರಚಿಸಿದ್ದಾರೆ. ಸದ್ಯ ಆಕಾಶವಾಣಿ ಮೈಸೂರು ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಮಂಜುನಾಥ್ ಅವರು ಶಿವಮೊಗ್ಗದ ಸಹ್ಯಾದ್ರಿ ಕಾಲೇಜಿನಲ್ಲಿ ಬಿ.ಎ ಓದುವಾಗಲೇ ಇಂಗ್ಲೀಷ್ ಗ್ರಾಮರ್ ಬಗ್ಗೆ ಪುಸ್ತಕ ಪ್ರಕಟಿಸಿದ್ದರು. ಈ ಪುಸ್ತಕ 10 ಬಾರಿ ಮರು ಮುದ್ರಣಕಂಡು ದಾಖಲೆ ಸೃಷ್ಟಿಸಿತ್ತು. ಆನಂತರ ಕುವೆಂಪು ವಿವಿಯಲ್ಲಿ ಇತಿಹಾಸದಲ್ಲಿ ಪ್ರಥಮರಾಗಿ ಪದವಿ ಗಳಿಸಿದ್ದರು. ಇಂಗ್ಲೀಷಿನಲ್ಲಿ ಎಂ.ಎ.ಮಾಡಲು ಬಯಸಿದ್ದ ಅವರು ಮೈಸೂರಿಗೆ ತೆರಳಿದರು. ಎಂ.ಎ ...
READ MORE