ಸಂಗವಳ್ಳಿಯ ಹುಲಿ: ರಾಯಣ್ಣ-ಡಾ. ಬಸವರಾಜ ನಾಯ್ಕರ್ ಅವರ ಸಾಮಾಜಿಕ ನಾಟಕ. ಸಂಗೊಳ್ಳಿ ರಾಯಣ್ಣ ಅವರ ಕುರಿತಂತೆ ಇರುವ ಐತಿಹಾಸಿಕ ನಾಟಕ. ಸಂಗೊಳ್ಳಿ ರಾಯಣ್ಣನ ಬದುಕು ಹಾಗೂ ಕಿತ್ತೂರು ಸಂಸ್ಥಾನ ಅಸ್ತಿತ್ವಕ್ಕಾಗಿ ಬ್ರಿಟಿಷರ ವಿರುದ್ಧ ನಡೆಸಿದ ಆತನ ಹೋರಾಟ, ಸ್ವದೇಶಿಯ ದೃಷ್ಟಿಕೋನ, ದೇಶಾಭಿಮಾನ, ಕಿತ್ತೂರಿನ ರಾಣಿ ಚೆನ್ನಮ್ಮರ ಬಗ್ಗೆ ಆತನಿಗಿದ್ದ ಅಭಿಮಾನ, ತೋರಿದ ನಿಷ್ಠೆ ಹಾಗೂ ಆತನ ಜೊತೆಗಿದ್ದವರೇ ಆತನಿಗೆ ಬಗೆದ ದ್ರೋಹ ಇತ್ಯಾದಿ ಪ್ರಸಂಗಗಳನ್ನು ಒಳಗೊಂಡ ನಾಟಕವಿದು.
ಡಾ. ಬಸವರಾಜ ನಾಯ್ಕರ್ ಅವರು ಮೂಲತಃ ಗದಗ (ಜನನ: 01-08-1949) ಜಿಲ್ಲೆಯ ನರಗುಂದದವರು. ತಂದೆ ಶಿವಶಂಕರಪ್ಪ ನಾಯ್ಕರ, ಧಾರವಾಡದಲ್ಲಿ ಪ್ರಾಥಮಿಕ ಶಿಕ್ಷಣ, ನರಗುಂದದಲ್ಲಿ ಪ್ರೌಢಶಿಕ್ಷಣ ಮತ್ತೇ ಧಾರವಾಡದಲ್ಲಿ ಪಿಯುಸಿಯಿಂದ ಕರ್ನಾಟಕ ವಿ.ವಿಯಲ್ಲಿ ಸ್ನಾತಕೋತ್ತರ ಪದವಿ (ಎಂ.ಎ-ಇಂಗ್ಲಿಷ್) ಹಾಗೂ ಕ್ಯಾಲಿಫೋರ್ನಿಯಾದಿಂದ ಡಿ.ಲಿಟ್ ಪದವೀಧರರು. ಗುಲಬರ್ಗಾ ವಿ.ವಿಯಲ್ಲಿ ಸಂಶೋಧನಾ ಸಹಾಯಕರಾಗಿ ವೃತ್ತಿ ಜೀವನ ಆರಂಭಿಸಿ ಅಲ್ಲಿಯೇ ಉಪನ್ಯಾಸಕರಾಗಿ ರೀಡರ್ ಆಗಿ ನಂತರ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ರೀಡರ್, ಪ್ರೊಫೆಸರ್, ಪ್ರೊಫೆಸರ್ ಎಮಿರಿಟಿಸ್ ಆಗಿ (2011-12) ನಿವೃತ್ತಿಯಾದರು. ಅನುವಾದಿತ ಕೃತಿಗಳು: ಪಡುವಣ ನಾಡಿನ ಪ್ರೇಮವೀರ- 1975, ಜೋಗೀಭಾವಿ-1976, ಕೊಳ್ಳದ ನೆರಳು-1978, ಹುಚ್ಚುಹೊಳೆ-1980, ನಿಗೂಢ ಸೌಧ (11 ಫ್ರೆಂಚ್ ಕಥೆಗಳ ಅನುವಾದ)-1982, ಗೋವರ್ಧನರಾಮ-1984, ಭಾರತೀಯ ಇಂಗ್ಲೀಷ್ ಸಾಹಿತ್ಯ ಚರಿತ್ರೆ-2006, ಕೆಂಪು ...
READ MORE