ಖ್ಯಾತ ಪತ್ರಕರ್ತ, ಸಂಯುಕ್ತ ಕರ್ನಾಟಕ ದಿನಪತ್ರಿಕೆಯನ್ನು ಒಂದು ಧೀಮಂತ ಪತ್ರಿಕೆಯನ್ನಾಗಿ ಮಾಡಿದ ಖ್ಯಾತಿ ಕೆ. ಶಾಮರಾವ್ ಅವರಿಗೆ ಸಲ್ಲುತ್ತದೆ. ಸಂಜಯ ಎಂಬ ಹೆಸರಿನಿಂದಲೇ ಅವರು ಅಂಕಣಗಳನ್ನು ಬರೆಯುತ್ತಿದ್ದರು. ಸಂಯುಕ್ತ ಕರ್ನಾಟಕ ದಿನಪತ್ರಿಕೆಯಿಂದ ಅವರು ಹೊರ ಬಂದ ಮೇಲೆ ವಿಜಯ ಕರ್ನಾಟಕ ದಿನಪತ್ರಿಕೆಯಲ್ಲಿ ಅಂಕಣ ಬರೆಯುತ್ತಿದ್ದು, ಆ ಬರಹಗಳ ಸಂಕಲನವೇ ‘ಸಂಜಯ ಉವಾಚ’. ಒಂದರ್ಥದಲ್ಲಿ ಅವರ ಅಫೂರ್ಣ ಆತ್ಮಕಥೆ ಎಂದೇ ಕರೆದು, ಆ ಎಲ್ಲ ಬರಹಗಳನ್ನು ಸಂಗ್ರಹಿಸಿ, ಸಂಪಾದಿಸಿ ಲೇಖಕ ವಿಶ್ವೇಶ್ವರ ಭಟ್ ಅವರು ನೀಡಿದ್ದೇ ಈ ಕೃತಿ-ಸಂಜಯ ಉವಾಚ.
ವಿಶ್ವೇಶ್ವರ ಭಟ್ ಅವರು ಉತ್ತರಕನ್ನಡ ಜಿಲ್ಲೆಯ ಕುಮಟಾದ ಮೂರೂರಿನವರು. ಓದಿದ್ದು ಎಂ.ಎಸ್ಸಿ. ಹಾಗೂ ಎಂ.ಎ. ನಾಲ್ಕು ಚಿನ್ನದ ಪದಕ ವಿಜೇತರು, ಇಂಗ್ಲೆಂಡಿನಲ್ಲಿ ಪತ್ರಿಕೋದ್ಯಮದಲ್ಲಿ ಉನ್ನತ ವ್ಯಾಸಂಗ, ಸಂಯುಕ್ತ ಕರ್ನಾಟಕ, ಕನ್ನಡಪ್ರಭದಲ್ಲಿ ಉಪಸಂಪಾದಕರಾಗಿ ವೃತ್ತಿ ಜೀವನ ಆರಂಭ, ವಿಜಯ ಕರ್ನಾಟಕ, ಕನ್ನಡ ಪ್ರಭ ಹಾಗೂ ಸುವರ್ಣ ನ್ಯೂಸ್ ಚಾನಲ್‌ನ ಪ್ರಧಾನ ಸಂಪಾದಕ, ಏಷಿಯನ್ ಕಾಲೇಜ್ ಆಫ್ ಜರ್ನಲಿಸಮ್‌ನಲ್ಲಿ ಅಸಿಸ್ಟೆಂಟ್ ಪ್ರೊಫೆಸರ್, ಕೇಂದ್ರ ಪ್ರವಾಸೋದ್ಯಮ ಹಾಗೂ ಸಂಸ್ಕೃತಿ ಖಾತೆ ಸಚಿವರಿಗೆ ವಿಶೇಷ ಕರ್ತವ್ಯ ಅಧಿಕಾರಿಯಾಗಿಯೂ ಸೇವೆ ಸಲ್ಲಿಸಿದ್ದಾರೆ. ಸದ್ಯ, “ವಿಶ್ವವಾಣಿ' ದಿನಪತ್ರಿಕೆಯ ಪ್ರಧಾನ ಸಂಪಾದಕರು. 'ನೂರೆಂಟು ವಿಶ್ವ, 'ಇದೇ ಅಂತರಂಗ ಸುದ್ದಿ' ...
READ MORE