ಎ.ಎನ್. ಮೂರ್ತಿರಾವ್ (ಅಕ್ಕಿಹೆಬ್ಬಾಳು ನರಸಿಂಹಮೂರ್ತಿರಾಯರು) ಅವರು ಕನ್ನಡದ ಖ್ಯಾತ ವಿಮರ್ಶಕ ಮತ್ತು ಸಾಹಿತಿ. ಪರಿಪಕ್ವ ಮನಸ್ಸಿನ, ಉದಾರ ಹೃದಯದ, ಆಳವಾದ ಪಾಂಡಿತ್ಯದ, ಆತ್ಮಾವಲೋಕನ ಪ್ರವೃತ್ತಿಯ, ಪುರೋಗಾಮಿ ನಿಲುವಿನ, ಕಲಾತ್ಮಕ ಧ್ಯೇಯ ನಿಷ್ಠೆಯ ಸಾಹಿತಿ. ಬದುಕು-ಬರೆಹಗಳೆರಡರಲ್ಲಿಯೂ ಅತ್ಯುನ್ನತ ಧ್ಯೇಯ-ಆದರ್ಶಗಳ ಪ್ರತೀಕವಾಗಿದ್ದ ಅವರ ಆತ್ಮಕತೆ ‘ಸಂಜೆಗಣ್ಣಿನ ಹಿನ್ನೋಟ’. ತಮ್ಮ ಜೀವನಾನುಭವದೊಂದಿಗೆ ನಾಸ್ತಿಕತೆಯ ನಂಬುಗೆಯ ಕುರಿತು ಲೇಖಕರು ಚರ್ಚಿಸಿದ್ದಾರೆ.
ಲಲಿತ ಪ್ರಬಂಧ ಪ್ರಕಾರಕ್ಕೆ ವಿಶೇಷ ಕೊಡುಗೆ ನೀಡಿದ್ದ ಅಕ್ಕಿ ಹೆಬ್ಬಾಳು ನರಸಿಂಹಮೂರ್ತಿರಾವ್ ವಿಮರ್ಶಕರೂ ಆಗಿದ್ದರು. ವೈಚಾರಿಕ ಗ್ರಂಥ ‘ದೇವರು’ ಮೂಲಕ ಜನಪ್ರಿಯರಾದ ಮೂರ್ತಿರಾವ್ ಅವರು 1900ರ ಜೂನ್ 18ರಂದು ಮಂಡ್ಯ ಜಿಲ್ಲೆಯ ಅಕ್ಕಿ ಹೆಬ್ಬಾಳಿನಲ್ಲಿ ಜನಿಸಿದರು. ತಂದೆ ಎಂ.ಸುಬ್ಬರಾವ್ ಮತ್ತು ತಾಯಿ ಪುಟ್ಟಮ್ಮ. ಬಾಲ್ಯದ ದಿನಗಳನ್ನು ಮೇಲುಕೋಟೆ, ನಾಗಮಂಗಲಗಳಲ್ಲಿ ಕಳೆದ ಮೇಲೆ 1913ರಲ್ಲಿ ಮೈಸೂರಲ್ಲಿ ವೆಸ್ಲಿಯನ್ ಮಿಷನ್ ಸ್ಕೂಲಿನಲ್ಲಿ ಶಾಲಾ ಶಿಕ್ಷಣ ಮುಗಿಸಿ ಮೈಸೂರು ಮಹಾರಾಜ ಕಾಲೇಜನ್ನು ಸೇರಿದರು. ಬಿ.ಎ. ಪದವಿ (1922), ಎಂ.ಎ. ಪದವಿ (1924) ಪಡೆದರು. ಮಹಾರಾಜ ಕಾಲೇಜಿನಲ್ಲಿ ಟ್ಯೂಟರ್ (1924), ಮೈಸೂರು ವಿಶ್ವವಿದ್ಯಾಲಯದಲ್ಲಿ ...
READ MORE