ಅನಂತಮೂರ್ತಿಯವರ ವಿಮರ್ಶಾ ಲೇಖನಗಳ ಸಂಗ್ರಹ ’ಸನ್ನಿವೇಶ’ದಲ್ಲಿ ಹತ್ತು ಬರೆಹಗಳಿವೆ. 1974ರಲ್ಲಿ ಮೊದಲ ಬಾರಿಗೆ ಪ್ರಕಟವಾಗಿದ್ದ ಈ ಸಂಗ್ರಹವು ಸಾಹಿತ್ಯ ವಿಮರ್ಶೆ, ಸಂದರ್ಶನ, ವ್ಯಕ್ತಿಚಿತ್ರಗಳನ್ನು ಒಳಗೊಂಡಿದೆ.
ಸನ್ನಿವೇಶ ಎಂಬ ಮೊದಲ ಲೇಖನದಿಂದ ಆರಂಭವಾಗುವ ಕೃತಿಯಲ್ಲಿ ’ಈಚಿನ ಸಾಹಿತ್ಯದ ಬಗ್ಗೆ’, ಅಕ್ಷರಜ್ಞಾನ ಮತ್ತು ಪ್ರಜ್ಞೆ, ಭಾರತೀಯತೆ, ಸಾಹಿತ್ಯ ಮತ್ತು ಪ್ರತಿಭಟನೆ, ನವ್ಯಕಾವ್ಯ ಮತ್ತು ತಾತ್ವಿಕತೆ, ಹಯವದನ, ಜನಪ್ರಿಯ ಕಲೆ ಮತ್ತು ಮಧ್ಯಮವರ್ಗ, ಜಾತಿ ವಿನಾಶ, ಶಾಂತವೇರಿ ಗೋಪಾಲಗೌಡರನ್ನು ಕುರಿತು ಲೇಖನಗಳಿವೆ.
ಕಥೆ-ಕಾದಂಬರಿ ಮತ್ತು ವೈಚಾರಿಕ ಚಿಂತನೆಗಳ ಮೂಲಕ ಕನ್ನಡ- ಭಾರತದ ಸಾಹಿತ್ಯ-ಸಾಂಸ್ಕೃತಿಕ ಚಿಂತನೆಯನ್ನು ಶ್ರೀಮಂತಗೊಳಿಸಿದವರು ಯು.ಆರ್. ಅನಂತಮೂರ್ತಿ. ತಂದೆ ಉಡುಪಿ ರಾಜಗೋಪಾಲಾಚಾರ್ಯ ತಾಯಿ ಸತ್ಯಮ್ಮ. ತೀರ್ಥಹಳ್ಳಿಯ ಮೇಳಿಗೆಯಲ್ಲಿ 1932ರ ಡಿಸೆಂಬರ್ 21 ಜನಿಸಿದರು. ದೂರ್ವಾಸಪುರದಲ್ಲಿ ಸಾಂಪ್ರದಾಯಿಕ ಪದ್ಧತಿಯಲ್ಲಿ ಸಂಸ್ಕೃತ ಕಲಿತು ಶಾಲಾ ಶಿಕ್ಷಣವನ್ನು ತೀರ್ಥಹಳ್ಳಿಯಲ್ಲಿ ಪಡೆದು ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಎಂ.ಎ. ಪದವಿ ಗಳಿಸಿದರು. ಬರ್ಮಿಂಗ್ ಹ್ಯಾಂ ವಿಶ್ವವಿದ್ಯಾಲಯದಲ್ಲಿ ಪಿಎಚ್ ಡಿ (1966) ಪದವಿ ಪಡೆದರು. ಹಾಸನದ ಕಾಲೇಜಿನಲ್ಲಿ ಅಧ್ಯಾಪಕ (1956) ರಾದ ಇವರು ಮೈಸೂರು ವಿಶ್ವವಿದ್ಯಾಲಯದಲ್ಲಿ ಇಂಗ್ಲಿಷ್ ಪ್ರಾಧ್ಯಾಪಕರಾಗಿ ನಂತರ ಕೇರಳದ ಮಹಾತ್ಮಗಾಂಧಿ ವಿಶ್ವವಿದ್ಯಾಲಯದ ಕುಲಪತಿ (1987-91) ಗಳಾಗಿ ...
READ MORE