ಮಧ್ಯಮ ವರ್ಗದ ಕುಟುಂಬದ ಹೆಣ್ಣು ಸುನಂದ ಕತೆಯೇ ಸರಿಗಮಪ ಎಂಬ ಪ್ರೇಮ ಕಾವ್ಯ. ಮಧ್ಯಮ ವರ್ಗದಲ್ಲಿ ಹುಟ್ಟಿದ ಹೆಣ್ಣುಮಗಳು ಅನುಭವಿಸುವ ಕಷ್ಟಗಳು ಹಾಗೂ ಸವಾಲುಗಳನ್ನು ಬೇಲೂರು ರಾಮಮೂರ್ತಿ ಅವರು ಬಹಳ ವಿಮರ್ಶಕತ್ಮವಾಗಿ ಕಟ್ಟಿಕೊಟ್ಟಿದ್ದಾರೆ. ಈ ಕಾದಂಬರಿಯು 2021 ಕರ್ಮವೀರ ವಾರಪತ್ರಿಕೆಯಲ್ಲಿ ಧಾರವಾಹಿಯಾಗಿ ಪ್ರಕಟಗೊಂಡು ತನ್ನದೇ ಆದ ಓದುಗರನ್ನು ಹೊಂದಿದೆ. ಈ ಕೃತಿಯು ಬೇಲೂರು ರಾಮಮೂರ್ತಿ ಅವರ 102ನೇ ಕೃತಿಯಾಗಿದೆ.
ಸಾಹಿತಿ ಬೇಲೂರು ರಾಮಮೂರ್ತಿ ಅವರು ಮೂಲತಃ ಮೈಸೂರಿನವರು. ತಮ್ಮ ಹಾಸ್ಯ ಲೇಖನಗಳ ಮೂಲಕ ಕನ್ನಡ ಸಾಹಿತ್ಯದಲ್ಲಿ ಚಿರಪರಿಚಿತರು. ಅವರು 1950 ಜೂನ್ 30ರಲ್ಲಿ ಜನಿಸಿದರು. ‘ಕಥಾ ಕುಸುಮ, ಕಥಾ ಕನ್ನಡಿ, ಕಥಾ ಬಿಂಬ, ಆಕಾಶದಿಂದ ಧರೆಗೆ’ ಅವರ ಕತಾ ಸಂಕಲನಗಳು. ‘ಪ್ರಬಂಧ, ನಾಟಕ, ಕಾದಂಬರಿ, ಹಾಸ್ಯ’ ಪ್ರಕಾರಗಳಲ್ಲಿ ಕೃಷಿ ಸಾಧಿಸಿದ್ದಾರೆ. ‘ಅನರ್ಘ್ಯ ಪ್ರೇಮ, ಅಗೋಚರ, ಜೋಡಿರಾಗ, ಅಪರಾಧಿ ನಾನಲ್ಲ, ಸುಮಂಗಲೆ, ಹೀಗೊಂದು ಸಾರ್ಥಕ ಬದುಕು, ಅಮೃತಗಾನ, ಅತಿಥಿ, ಶರ್ಮಿಳ, ಅಗ್ನಿಜ್ವಾಲೆ, ಅಭಿಷೇಕ, ಅರುಂಧತಿ, ಸಂಬಂಧ ರಾಗ, ಸ್ವರಸಂಗಮ, ತೂಗುಸೇತುವೆ, ಮುತ್ತಿನ ತೆನೆ, ಸಮಾಗಮ, ಕಾಣದ ಊರಲಿ, ಎಂದೂ ನಿನ್ನವನೇ, ಪ್ರೇಮನಿವೇದನೆ, ...
READ MORE