ಖ್ಯಾತ ಲೇಖಕಿ ಇರಾವತಿ ಕರ್ವೆ ಅವರು ಮರಾಠಿಯಲ್ಲಿ ಬರೆದ ಲೇಖನಗಳನ್ನು ಅನುವಾದಕ-ಲೇಖಕ ಚಂದ್ರಕಾಂತ ಪೋಕಳೆ ಅವರು ಕನ್ನಡಕ್ಕೆ ಅನುವಾದಿಸಿದ ಕೃತಿ ಇದು-ಸಾರ್ಥಕತೆ. ಗದ್ಯ ಬರಹಗಳ ಸಂಗ್ರಹ ಕೃತಿ ಎಂಬ ಉಪಶೀರ್ಷಿಕೆಯನ್ನೂ ನೀಡಲಾಗಿದೆ. ‘ಯುಗಾಂತ’ ಕೃತಿಯ ಮೂಲಕ ಖ್ಯಾತಿ ಪಡೆದ ಇರಾವತಿ ಕರ್ವೆ ಅವರು, ಬರಹಗಳನ್ನು ಕೃತಿಗಳನ್ನು ಹೊಸ ದೃಷ್ಟಿಕೋನದಿಂದ ನೋಡುವ ಬಗೆಯನ್ನು ತಿಳಿಸಿದರು. ಅಂತಹ ವೈಚಾರಿಕತೆಯನ್ನು ಒಳಗೊಂಡ ಬರಹಗಳನ್ನು ಇಲ್ಲಿ ಸಂಕಲಿಸಿ, ಅನುವಾದಿಸಲಾಗಿದೆ.
ಲೇಖಕರು, ಪ್ರಖ್ಯಾತ ಅನುವಾದಕರೂ ಆದ ಚಂದ್ರಕಾಂತ ಪೊಕಳೆ ಅವರು 20-08-1949 ರಂದು ಜನಿಸಿದರು. ಹುಟ್ಟೂರು ಉತ್ತರ ಕನ್ನಡ ಜಿಲ್ಲೆಯ ಮಂಚಿಕೇರಿ. ತಂದೆ- ಮಹಾಬಲೇಶ್ವರ, ತಾಯಿ- ಪಾರ್ವತಿ. ಹೈಸ್ಕೂಲುವರೆಗೆ ಮಂಚಿಕೇರಿಯಲ್ಲಿ ಓದಿದ ಅವರು, ಧಾರವಾಡದ ಕಾಲೇಜಿನಿಂದ ಬಿ.ಎ ಪದವಿ ಮತ್ತು ಕರ್ನಾಟಕ ವಿಶ್ವವಿದ್ಯಾಲಯದಿಂದ ಎಂ.ಎ. ಪದವಿಗಳಿಸಿದ್ದಾರೆ. ಧಾರವಾಡದಲ್ಲಿ ವಿದ್ಯಾರ್ಥಿಯಾಗಿದ್ದಾಗಲೇ ಗೌರೀಶ ಕಾಯ್ಕಿಣಿ, ಶಂಬಾ, ಬೇಂದ್ರೆ, ಇವರುಗಳ ಸಾಹಿತ್ಯದಿಂದ ಪ್ರೇರಿತರಾದ ಪೊಕಳೆ, ಅಧ್ಯಾಪಕ ವೃತ್ತಿಯನ್ನು ಆಯ್ಕೆ ಮಾಡಿಕೊಂಡವರು. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಬೇಡಕಿಹಾಳದ ಲಠ್ಠೆ ಶಿಕ್ಷಣ ಸಂಸ್ಥೆಯಲ್ಲಿ ಅಧ್ಯಾಪಕ ವೃತ್ತಿ ಆರಂಭಿಸಿದ ಅವರು ಪ್ರಾಂಶುಪಾಲರಾಗಿ ಕಾರ್ಯ ನಿರ್ವಹಿಸಿ ನಿವೃತ್ತಿ ...
READ MORE