ಜೀವಪರ ಕಾಳಜಿಯ ಕಥೆಗಳು ಇಂದು ಶಿಶು ಸಾಹಿತ್ಯವನ್ನು ಸಮೃದ್ಧಗೊಳಿಸುವ ನಿಟ್ಟಿನಲ್ಲಿ ಅವಿರತ ಪರಿಶ್ರಮದಿಂದ ಕೃಷಿ ಮಾಡಿ ಪ್ರಸಿದ್ಧರಾಗಿರುವ ಕೋಲಾರದ ಚಿನ್ನದ ಮಣ್ಣಿನ ಪ್ರತಿಭೆ ಡಾ.ಸಿ.ಎಂ.ಗೋವಿಂದರೆಡ್ಡಿಯವರು ಇದೀಗ ‘ಸವುಡಿ’ ಎಂಬ ಕಥಾಸಂಕಲನವನ್ನು ಓದುಗರಿಗೆ ನೀಡುತ್ತಿದ್ದಾರೆ.
ಮಕ್ಕಳ ಸಾಹಿತಿ ಎಂದು ಹೆಸರಾಗಿರುವ ಡಾ.ಸಿ.ಎಂ.ಗೋವಿಂದರೆಡ್ಡಿಯವರು ಮಕ್ಕಳ ಸಾಹಿತ್ಯದ ಜೊತೆಗೆ ಇತರೆ ಸಾಹಿತ್ಯದಲ್ಲೂ ಕೃತಿಗಳನ್ನು ರಚಿಸಿದ್ದಾರೆ. ಇವರು ೧೯೫೮ರ ಆಗಸ್ಟ್ ೧೧ರಂದು ಕೋಲಾರ ಜಿಲ್ಲೆ ಮಾಲೂರು ತಾಲ್ಲೂಕಿನ ಚನ್ನಿಗರಾಯಪರ ಗ್ರಾಮದ ಮುನಿಸ್ವಾಮಿರೆಡ್ಡಿ ಮತ್ತು ಸುಬ್ಬಮ್ಮ ದಂಪತಿಗಳ ಮಗನಾಗಿ ಜನಿಸಿದರು. ತಾಳಕುಂಟೆ, ಲಕ್ಕೂರು ಮತ್ತು ಮಾಲೂರಿನಲ್ಲಿ ಕ್ರಮವಾಗಿ ಪ್ರಾಥಮಿಕ, ಮಾಧ್ಯಮಿಕ ಮತ್ತು ಪ್ರೌಢಶಿಕ್ಷಣವನ್ನು ಪಡೆದು, ಮೈಸೂರು ವಿಶ್ವವಿದ್ಯಾಲಯದಿಂದ ಪದವಿ ಮತ್ತು ಸ್ನಾತಕೋತ್ತರ ಪದವಿಗಳನ್ನು ಪಡೆದುಕೊಂಡದ್ದಲ್ಲದೆ ‘ಕೋಲಾರಜಿಲ್ಲೆಯ ಜಾತ್ರೆಗಳು’ ಎಂಬ ವಿಷಯದಲ್ಲಿ ಪಿಎಚ್.ಡಿ. ಮಹಾಪ್ರಬಂಧವನ್ನು ರಚಿಸಿ ಡಾಕ್ಟರೇಟ್ ಪದವಿಯನ್ನೂ ಪಡೆದರು. ಇವರು ಸಾರ್ವಜನಿಕ ಶಿಕ್ಷಣ ಇಲಾಖೆಯಲ್ಲಿ ಪ್ರಾಥಮಿಕ ಶಾಲಾಶಿಕ್ಷಕರಾಗಿ, ಪ್ರೌಢಶಾಲಾ ...
READ MORE