'ಭೂಮಿ ಮತ್ತು ಮನುಷ್ಯ', 'ಕಾಲ ಮತ್ತು ಮನುಷ್ಯ', 'ಕಾಮ ಮತ್ತು ಮನುಷ್ಯ', 'ಸಮಾಜ ಮತ್ತು ಮನುಷ್ಯ'- ಹೀಗೆ ನಾಲ್ಕು ಭಾಗಗಳಲ್ಲಿರುವ ಪ್ರಬಂಧ, ಕನ್ನಡ ಕಾವ್ಯದ ಮುಖ್ಯ ಕಾಳಜಿಗಳನ್ನು ಪರೀಕ್ಷಿಸುವುದರ ಜೊತೆಯಲ್ಲೆ, ಕನ್ನಡದ ಎಲ್ಲ ಮುಖ್ಯ ಆಧುನಿಕ ಕವಿಗಳ ಮೇಜರ್ ಎನ್ನಬಹುದಾದ ಕೃತಿಗಳೆಲ್ಲವನ್ನೂ ಆಳವಾಗಿ, ಸೂಕ್ಷ್ಮವಾಗಿ ಒಂದು ಕೇಂದ್ರ ದೃಷ್ಟಿಕೋನದ ಪ್ರವೇಶಕ್ಕೆ ಸಿಕ್ಕುವಂತೆ ಚರ್ಚಿಸಲು ಪ್ರಬಂಧದಲ್ಲಿ ಅವಕಾಶ ಮಾಡಿಕೊಳ್ಳಲಾಗಿದೆ.
ಕನ್ನಡದ ಖ್ಯಾತ ವಿಮರ್ಶಕ ಹಾಗೂ ಚಿಂತಕರಾದ ಡಾ.ಡಿ.ಆರ್.ನಾಗರಾಜು ಅವರು ಹುಟ್ಟಿದ್ದು ದೊಡ್ಡಬಳ್ಳಾಪುರದಲ್ಲಿ. ತಂದೆ ರಾಮಯ್ಯ, ತಾಯಿ ಅಕ್ಕಯ್ಯಮ್ಮ. ದೊಡ್ಡಬಳ್ಳಾಪುರದಲ್ಲಿ ಪ್ರಾಥಮಿಕ ಶಿಕ್ಷಣ ಮುಗಿಸಿದ ನಾಗರಾಜ್ ಪ್ರೌಢ ವ್ಯಾಸಂಗಕ್ಕಾಗಿ ಬೆಂಗಳೂರಿಗೆ ಬಂದರು. ಅಂದಿನ ಸರ್ಕಾರಿ ಆರ್ಟ್ಸ್ ಮತ್ತು ಸೈನ್ಸ್ ಕಾಲೇಜಿನ ವಿದ್ಯಾರ್ಥಿಯಾದ ಅವರು ಆನರ್ಸ್ ಪದವಿಯನ್ನು ಅಲ್ಲಿಯೇ ಪಡೆದರು. ಮುಂದೆ ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಎಂ.ಎ ಪದವಿ ಪಡೆದ ಡಿ.ಆರ್ ಸ್ವಲ್ಪ ಕಾಲ ಸಂಶೋಧಕ ವೃತ್ತಿಯಲ್ಲಿದ್ದು ಅಲ್ಲಿಯೇ ಕನ್ನಡ ಅಧ್ಯಾಪಕರಾದರು. ಪ್ರವಾಚಕರಾದರು, ಜೊತೆಗೆ ಕೈಲಾಸಂ ಪೀಠದ ಸಂದರ್ಶಕ ಪ್ರಾಧ್ಯಾಪಕರೂ ಆದರು. ಕನ್ನಡದ ವಿಮರ್ಶೆಗೆ ಸಾಂಸ್ಕೃತಿಕ ಆಯಾಮವನ್ನು ಒದಗಿಸಿದ ನಾಗರಾಜ್ ಅಮೆರಿಕದ ...
READ MORE