‘ಶಾಲ್ಮಲಾ ನನ್ನ ಶಾಲ್ಮಲಾ’ 2011ನೇ ಸಾಲಿನ ವಿಶ್ವಕನ್ನಡ ಸಮ್ಮೇಳನದ ನೆನಪಿನಲ್ಲಿ ಹೊರತಂದ ಸಾಹಿತ್ಯ ಮಾಲೆಯಲ್ಲಿ ಪ್ರಕಟವಾದ ಚಂದ್ರಶೇಖರ ಪಾಟೀಲರ ಕವನ ಸಂಕಲನ. ಚಂಪಾ ಅವರ ನನ್ನ ಅರ್ಧ ಸತ್ಯದ ಹುಡುಗಿಯ ನಂತರದ ಅವಧಿಯಲ್ಲಿ ಬರೆದ ಕವನಗಳು ಈ ಕೃತಿಯಲ್ಲಿ ಸಂಕಲನಗೊಂಡಿವೆ. ಆಶಯ ಮತ್ತು ಶೈಲಿಗಳನ್ನು ಆಧಾರವಾಗಿಟ್ಟುಕೊಂಡು ಈ ಕವನಗಳಲ್ಲಿ ಭಾಗಗಳನ್ನು ಮಾಡದೇ, ಅವು ರಚಿತವಾದ ಕಾಲಕ್ರಮದಲ್ಲಿಯೇ ಪ್ರಕಟಿಸಿದ್ದಾರೆ. ವ್ಯಂಗ್ಯ, ವಿನೋದ, ಪ್ರೇಮ, ನೋವು, ನಿಟ್ಟುಸಿರು- ಎಲ್ಲವನ್ನೂ ಇಲ್ಲಿ ಕಾಣಬಹುದಾಗಿದೆ.
'ಚಂಪಾ' ಎಂದೇ ಕನ್ನಡ ಸಾಹಿತ್ಯಲೋಕದಲ್ಲಿ ಚಿರಪರಿಚಿತ ಇರುವ ಚಂದ್ರಶೇಖರ ಪಾಟೀಲರು ಕವಿ-ನಾಟಕಕಾರ. ಕನ್ನಡನಾಡಿನ ಸಾಹಿತ್ಯಕ, ಸಾಮಾಜಿಕ, ಸಾಂಸ್ಕೃತಿಕ, ರಾಜಕೀಯ ಚಳುವಳಿಗಳ ಮುಂಚೂಣಿಯಲ್ಲಿ ಕೇಳಿಬರುವ ಹೆಸರು ’ಚಂಪಾ’ ಅವರದು. ಹಾವೇರಿ ಜಿಲ್ಲೆಯ ಹತ್ತೀಮತ್ತೂರಿನಲ್ಲಿ ಜನಿಸಿದರು (1939). ತಂದೆ ಬಸವರಾಜ ಹಿರೇಗೌಡ ಪಾಟೀಲ, ತಾಯಿ ಮುರಿಗೆವ್ವ. ಹತ್ತೀಮುತ್ತೂರಿನಲ್ಲಿ ಪ್ರಾಥಮಿಕ, ಮಾಧ್ಯಮಿಕ ಶಾಲಾ ವಿದ್ಯಾಭ್ಯಾಸ, ಹಾವೇರಿಯಲ್ಲಿ ಹೈಸ್ಕೂಲು ಶಿಕ್ಷಣ ಪಡೆದ ಅವರು ಹೆಚ್ಚಿನ ಅಧ್ಯಯನಕ್ಕಾಗಿ ಧಾರವಾಡದ ಕರ್ನಾಟಕ ಕಾಲೇಜು ಸೇರಿದರು. ಕಾಲೇಜಿನಲ್ಲಿದ್ದ ದಿನಗಳಲ್ಲಿಯೇ 'ಚಂಪಾ' ಅವರ ಅಕ್ಷರಗಳಿಗೆ ಕಾವ್ಯದ ಗರಿ ಮೂಡಿದವು. ಆಗ ಖ್ಯಾತ ಕವಿ ಗೋಕಾಕರು ಕರ್ನಾಟಕ ಕಾಲೇಜಿನಲ್ಲಿದ್ದರು. ’ನಮಗೆಲ್ಲ ...
READ MORE