ಡಾ. ಶೆಟ್ಟರ್, ದಕ್ಷಿಣ ಭಾರತದ ಚಿಂತಕ, ಇತಿಹಾಸಜ್ಞರು. ಈ ಪುಸ್ತಕದಲ್ಲಿ ಕನ್ನಡವನ್ನು ದ್ರಾವಿಡಲೋಕದಲ್ಲೂ, ಸಂಸ್ಕೃತ ಲೋಕದಲ್ಲೂ ಇಟ್ಟು ಅವರು ನೋಡುವ ಕ್ರಮ ಘನವಾದ ಹೊಸ ಪರಿಕಲ್ಪನೆಗೆ ಎಡೆಮಾಡಿಕೊಟ್ಟಿದೆ.
'ಶಂಗಂ ತಮಿಳಗಂ ಮತ್ತು ಕನ್ನಡ ನಾಡು-ನುಡಿ' ಪುಸ್ತಕವನ್ನೋದಿದಾಗ ಕನ್ನಡ ಸಾಹಿತ್ಯದಲ್ಲಿ ಪಂಪ, ವಚನಕಾರರು, ಕುವೆಂಪು, ಬೇಂದ್ರೆ, ಅಡಿಗ, ಪುತಿನ, ಕಂಬಾರ ಇತ್ಯಾದಿ ಹಲವರನ್ನು ನಾವು ವಿಮರ್ಶಿಸುವ ದಾರಿಗಳು ಸ್ಪಷ್ಟವಾಗುತ್ತದೆ.
ಷ.ಶೆಟ್ಟರ್ ಅವರು ಹುಟ್ಟಿದ್ದು 11 ಡಿಸೆಂಬರ್ 1935 ರಂದು. ಊರು ಬಳ್ಳಾರಿ ಜಿಲ್ಲೆಯ ಹಂಪಸಾಗರ. ಮೈಸೂರು, ಧಾರವಾಡ ಮತ್ತು ಕೇಂಬ್ರಿಜ್ ಗಳಲ್ಲಿ ಉನ್ನತ ವ್ಯಾಸಂಗ, ಇತಿಹಾಸ, ಪ್ರಾಕ್ತನಶಾಸ್ತ್ರ, ಮಾನವಶಾಸ್ತ್ರ, ಕಲಾ ಇತಿಹಾಸ, ದರ್ಶನಶಾಸ್ತ್ರ ಮತ್ತು ಹಳಗನ್ನಡ ಕುರಿತು 27ಕ್ಕೂ ಹೆಚ್ಚು ಸಂಶೋಧನಾ ಗ್ರಂಥಗಳ ಪ್ರಕಟಣೆ. ವಿವಿಧ ವಿಶ್ವವಿದ್ಯಾಲಯದಲ್ಲಿ ಬೋಧನೆ. 1960 -96, ಭಾರತೀಯ ಕಲಾ ಇತಿಹಾಸ ಸಂಸ್ಥೆಯ ನಿರ್ದೇಶಕತ್ವ 1978-95, ನವದೆಹಲಿಯ ಇಂಡಿಯನ್ ಕೌನ್ಸಿಲ್ ಆಫ್ ಹಿಸ್ಟಾರಿಕಲ್ ರಿಸರ್ಚ್ ಅಧ್ಯಕ್ಷ ಸ್ಥಾನ-1996-99, ಬೆಂಗಳೂರಿನ ನ್ಯಾಷನಲ್ ಇನ್ಸ್ ಟಿಟ್ಯೂಟ್ ಆಫ್ ಅಡ್ವಾನ್ಸಡ್ ಸ್ಟಡೀಸ್ ನಲ್ಲಿ ಡಾ.ಎಸ್.ರಾಧಾಕೃಷ್ಣನ್ ಪ್ರಾಧ್ಯಾಪಕತ್ವ 2002-2010, ...
READ MOREಕೇಂದ್ರ ಸಾಹಿತ್ಯ ಅಕಾಡೆಮಿಯ ಭಾಷಾ ಸಮ್ಮಾನ್ ಪ್ರಶಸ್ತಿ