ಕಾಗೋಡು ಸತ್ಯಾಗ್ರಹದಲ್ಲಿ ಪ್ರಮುಖ ಪಾತ್ರವಹಿಸಿದ್ದ ಗೋಪಾಲಗೌಡರು ಕರ್ನಾಟಕದಲ್ಲಿ ಜನಪರ ಚಿಂತನೆ ಹಾಗೂ ವೈಚಾರಿಕತೆ ಬೆಳೆಸುವಲ್ಲಿ ನೀಡಿದ ಕೊಡುಗೆ ಅಪಾರವಾದುದು. ಸಮಾಜವಾದಿ ಚಿಂತನೆಯಗೋಪಾಲಗೌಡರು ‘ಉಳುವವನೇ ಹೊಲದೊಡೆಯ’ ಕಾಯ್ದೆ ಜಾರಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಇವರು ನಡೆಸಿದ ಗೇಣಿದಾರ ರೈತರ ಹೋರಾಟ ಕೃಷಿಕ ವರ್ಗದ ಬವಣೆಯನ್ನು ಮುಖ್ಯವಾಹಿನಿಯ ಚರ್ಚೆಗೆ ತಂದಿತ್ತು. ರಾಜಕಾರಣಿಯಾಗಿಯೂ ಆದರ್ಶಮಯ ಹಾದಿಯನ್ನು ಬಿಟ್ಟುಹೋಗಿರುವ ಗೋಪಾಲಗೌಡರ ಬದುಕನ್ನು, ಜೀವನ ಸಾಧನೆಗಳ ವಿವರಗಳನ್ನು ನಾ. ಡಿಸೋಜಾರವರ ಈ ಕೃತಿಯಲ್ಲಿ ವಿವರಿಸಿದ್ದಾರೆ.
ನಾ ಡಿಸೋಜ ಬರಹಗಾರರು, ಲೋಕೋಪಯೋಗಿ ಇಲಾಖೆಯಲ್ಲಿ ನೌಕರರಾಗಿ ನಿವೃತ್ತಿ ಹೊಂದಿದವರು. ಸುಮಾರು ಐದು ದಶಕಗಳಿಂದಲೂ ಕನ್ನಡ ಸಾಹಿತ್ಯದ ಎಲ್ಲ ಪ್ರಕಾರಗಳಲ್ಲಿಯೂ ಕೃತಿ ರಚಿಸುತ್ತ ಬಂದಿರುವ ನಾರ್ಬರ್ಟ್ ಡಿಸೋಜ ಅವರು ಹುಟ್ಟಿದ್ದು ಜೂನ್ 6, 1937 ರಲ್ಲಿ. ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಜನಿಸಿದರು. ತಂದೆ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರಾಗಿದ್ದ ಎಫ್.ಪಿ. ಡಿಸೋಜ, ತಾಯಿ ರೂಪೀನಾ ಡಿಸೋಜ. ಅವರು 2025 ಜ. 05 ಭಾನುವಾರದಂದು ನಿಧನರಾದರು. ಪರಿಸರ ಕಾಳಜಿಯುಳ್ಳ ಮಹತ್ವದ ಕಥೆಗಾರರೆನಿಸಿದ್ದು ಕನ್ನಡ ಸಾಹಿತ್ಯ ಲೋಕದಲ್ಲಿ ಮಕ್ಕಳ ಸಾಹಿತ್ಯವನ್ನು ಒಳಗೊಂಡಂತೆ ಅಪಾರವಾದ ಕೃಷಿ ನಡೆಸಿದ್ದಾರೆ. ಪ್ರಾರಂಭದ ದಿನಗಳಲ್ಲಿ 'ಪ್ರಪಂಚ' ಪತ್ರಿಕೆಗೆ ...
READ MORE