ಶರಣರ ಅನುಭಾವ ಸಾಹಿತ್ಯ

Author : ಎಚ್‌. ತಿಪ್ಪೇರುದ್ರಸ್ವಾಮಿ

Pages 308

₹ 146.00




Year of Publication: 2019
Published by: ಡಿ.ವಿ.ಕೆ. ಮೂರ್ತಿ

Synopsys

ಹಿರಿಯ ಶರಣ ಸಾಹಿತಿ ಎಚ್‌. ತಿಪ್ಪೇರುದ್ರಸ್ವಾಮಿ ಅವರು ಶರಣರ ಅನುಭಾವ ಸಾಹಿತ್ಯ ಕುರಿತು ನಡೆಸಿದ ಚಿಂತನೆ-ಜಿಜ್ಞಾಸೆ ಈ ಗ್ರಂಥದಲ್ಲಿ ದಾಖಲಾಗಿದೆ. ಹನ್ನೆರಡನೆಯ ಶತಮಾನದ ಶರಣ ಅನುಭಾವದ ಪರಿಕಲ್ಪನೆ ಮತ್ತು ಅದರ ಸ್ವರೂಪವನ್ನು ಲೇಖಕರು ಚರ್ಚಿಸಿದ್ದಾರೆ. ಪುಸ್ತಕವನ್ನು ಶಿವತತ್ವ ವಿಕಾಸ, ಶರಣರ ತತ್ವದರ್ಶನ ಮತ್ತು ಸಾಧನೆ, ಶರಣರ ವಿಚಾರಧಾರೆ, ಶರಣರ ಅನುಭಾವ ಮಾರ್ಗ, ಶರಣರ ಸಾಹಿತ್ಯ ಎಂಬ ಅಧ್ಯಾಯಗಳಲ್ಲಿ ವರ್ಗೀಕರಿಸಿ ವಿಶ್ಲೇಷಿಸಿದ್ದಾರೆ.

About the Author

ಎಚ್‌. ತಿಪ್ಪೇರುದ್ರಸ್ವಾಮಿ
(03 February 1928 - 28 October 1994)

ಶರಣರನ್ನು ಕುರಿತು ಕಾದಂಬರಿ ರಚಿಸುವ ಮೂಲಕ ಜನಪ್ರಿಯರಾಗಿರುವ ಎಚ್. ತಿಪ್ಪೇರುದ್ರಸ್ವಾಮಿ ಅವರು ಕರ್ನಾಟಕದ ಸಂಸ್ಕೃತಿಯ ಬಗ್ಗೆ ಆಳವಾದ ಅಧ್ಯಯನ ನಡೆಸಿದವರು. ಶಿವಮೊಗ್ಗ ಜಿಲ್ಲೆಯ ಹೊನ್ನಾಳಿಯವರಾದ ತಿಪ್ಪೇರುದ್ರಸ್ವಾಮಿ ಜನಿಸಿದ್ದು 1928ರ ಫೆಬ್ರುವರಿ 3ರಂದು. ತಂದೆ ಚೆನ್ನಮಲ್ಲಯ್ಯ, ತಾಯಿ ಬಸಮ್ಮ. ಹೊನ್ನಾಳಿ, ಶಿರಾಳಕೊಪ್ಪ ತೀರ್ಥಹಳ್ಳಿ, ಶಿವಮೊಗ್ಗದಲ್ಲಿ ಆರಂಭಿಕ ಶಿಕ್ಷಣ ಪಡೆದ ತಿಪ್ಪೇರುದ್ರಸ್ವಾಮಿ ಅವರು ಮೈಸೂರು ವಿಶ್ವವಿದ್ಯಾಲಯದಿಂದ ಚಿನ್ನದ ಪದಕದೊಂದಿಗೆ ಸ್ನಾತಕ ಮತ್ತು ಸ್ನಾತಕೋತ್ತರ ಪದವಿ (ಎಂ.ಎ.) ಪಡೆದರು. ಶರಣರ ಅನುಭಾವ ಪ್ರಪಂಚ ಮಹಾಪ್ರಬಂಧಕ್ಕೆ ಡಾಕ್ಟೊರೇಟ್‌ ಪದವಿ (1962) ಪಡೆದರು. ಹಾಸನದ ಕಾಲೇಜಿನಲ್ಲಿ ಕನ್ನಡ ಅಧ್ಯಾಪಕರಾಗಿ ವೃತ್ತಿ ಜೀವನ ಆರಂಭಿಸಿದ ತಿಪ್ಪೇರುದ್ರಸ್ವಾಮಿ ...

READ MORE

Related Books