ಶರತ್ ಕಥೆಗಳು

Author : ರಾಜೇಶ್ವರಿ ಕೆ.ವಿ.

Pages 384

₹ 243.00




Year of Publication: 2015
Published by: ಇಂದಿರಾ ಪ್ರಕಾಶನ
Address: ಬೆಂಗಳೂರು

Synopsys

ಬಂಗಾಳಿ ಸಾಹಿತಿ ಶರತ್ ಚಂದ್ರ ಚಟ್ಟೋಪಾಧ್ಯಾಯ ಅವರು ಬರೆದ ಕಥೆಗಳನ್ನು ಲೇಖಕಿ ಕೆ.ವಿ. ರಾಜೇಶ್ವರಿ ಅವರು ಕನ್ನಡಕ್ಕೆ ಅನುವಾದಿಸಿದ್ದಾರೆ. ಕತೆಯ ವಸ್ತು, ನಿರೂಪಣೆ ಶೈಲಿ, ಸನ್ನಿವೇಶಗಳ ಹೆಣಿಕೆ, ಸರಳವಾಗಿ ಕಥೆ ಹೇಳುವ ವಿಧಾನ -ಈ ಎಲ್ಲವುಗಳಿಂದ ಶರತ್ ಚಂದ್ರರು ಸಾಹಿತ್ಯ ವಲಯದಲ್ಲಿ ತಮ್ಮದೇ ಪ್ರಭಾವ ಹೊಂದಿದ್ದು, ಅವರ ಸಣ್ಣ ಕಥೆಗಳನ್ನು ಲೇಖಕಿ ಕನ್ನಡಕ್ಕೆ ಪರಿಚಯಿಸಿದ್ದಾರೆ.

About the Author

ರಾಜೇಶ್ವರಿ ಕೆ.ವಿ.

ಕಾದಂಬರಿಗಾರ್ತಿ ರಾಜೇಶ್ವರಿ ಕೆ. ವಿ.  ಅವರು  ಕನ್ನಡದ ಜನಪ್ರಿಯ ಕಾದಂಬರಿಗಾರ್ತಿಯರಲ್ಲಿ ಒಬ್ಬರು. ಅಂಚೆ ಕಛೇರಿಯಲ್ಲಿ ವೃತ್ತಿ ಆರಂಭಿಸಿದ ಅವರು ಬೆಂಗಳೂರಿನಲ್ಲಿ ನೆಲೆಸಿದ್ದಾರೆ. ತಂದೆ ವೆಂಕಟಪತಿ, ತಾಯಿ ಸಾವಿತ್ರಮ್ಮ.  ‘ಬಾಳೆಂಬ ದೋಣಿ, ವಂಶೋದ್ದಾರಕ, ಮಧೂಲಿಕ, ಚಿಗುರಿದ ಕುಡಿ, ಪಂಜರದ ಗಿಳಿ, ಸೌಂದರ್ಯ, ಮೊದಲ ಮೆಟ್ಟಿಲು, ಸೂತ್ರಧಾರ, ಹೊಸ ಬದುಕು, ಹರ್ಷದ ಹೊನಲು, ಹೊನ್ನ ಹರಿಗೋಲು’ ಕಾದಂಬರಿಗಳನ್ನು ರಚಿಸಿದ್ದಾರೆ. ಅವರು ಕಾದಂಬರಿಗಳಲ್ಲದೆ ವಾಸ್ತುಶಿಲ್ಪ, ವಿಜ್ಞಾನ, ಹೊಲಿಗೆ, ಪಾಕಶಾಸ್ತ್ರ, ಹಾಸ್ಯ, ಕಾವ್ಯ, ಕಂಪ್ಯೂಟರ್ ಮೊದಲಾಗಿ ವಿಷಯ ವಸ್ತುಗಳಿಗೆ ಸಂಬಂಧಿಸಿದಂತೆ ಅನೇಕ ಪುಸ್ತಕಗಳನ್ನು ರಚಿಸಿದ್ದಾರೆ.  ...

READ MORE

Related Books