ಲೇಖಕ ನಟರಾಜ ಹುಳಿಯಾರ್ ಅವರ ನಾಟಕ ಕೃತಿ-ಶೇಕ್ ಸ್ಪಿಯರ್ ಮನೆಗೆ ಬಂದ. ಶೇಕ್ ಸ್ಪಿಯರ್ ಎಂಬ ಪಾತ್ರ ಸೃಷ್ಟಿಸುವ ಮೂಲಕ ನಾಟಕದಲ್ಲಿ ಹಾಸ್ಯವನ್ನು ತುಂಬಿ, ಪ್ರೇಕ್ಷಕರ ಮನರಂಜಿಸುವ ಕೃತಿ ಇದು. ಚುರುಕು ಸಂಭಾಷಣೆ, ಸನ್ನಿವೇಶಗಳ ಜೋಡಣೆಯಿಂದ ಈ ಕೃತಿ ಓದುಗರ ಹಾಗೂ ಪ್ರೇಕ್ಷಕರ ಗಮನ ಸೆಳೆಯುತ್ತದೆ.
ಕತೆಗಾರ-ಲೇಖಕ ನಟರಾಜ ಹುಳಿಯಾರ್ ಅವರು ತುಮಕೂರು ಜಿಲ್ಲೆಯ ಹುಳಿಯಾರಿನವರು. ಇಂಗ್ಲಿಷ್ ಸಾಹಿತ್ಯದಲ್ಲಿ ಸ್ನಾತಕೋತ್ತರ (ಎಂ.ಎ.) ಪದವಿ ಪಡೆದಿರುವ ಅವರು'ಆಧುನಿಕ ಆಫ್ರಿಕನ್ ಹಾಗೂ ಕನ್ನಡ ಸಾಹಿತ್ಯಗಳಲ್ಲಿ ಆಧುನಿಕತೆ ಮತ್ತು ಪರಂಪರೆ’ ವಿಷಯದಲ್ಲಿ ಪಿಎಚ್.ಡಿ. ಪದವಿ ಪಡೆದಿದ್ದಾರೆ. ಸದ್ಯ ಬೆಂಗಳೂರು ವಿಶ್ವ ವಿದ್ಯಾಲಯದ ಕನ್ನಡ ಅಧ್ಯಯನ ಕೇಂದ್ರದಲ್ಲಿ ಇಂಗ್ಲಿಷ್ ಪ್ರಾಧ್ಯಾಪಕರಾಗಿದ್ದಾರೆ. ಮತ್ತೊಬ್ಬ ಸರ್ವಾಧಿಕಾರಿ, ಬಸವಲಿಂಗಪ್ಪನವರು ಮತ್ತು ಡೇವಿಡ್ ಸಾಹೇಬರು, ಮಾಯಾಕಿನ್ನರಿ (ಕಥಾಸಂಕಲನಗಳು), ರೂಪಕಗಳ ಸಾವು (ಕವಿತೆಗಳು), ಗಾಳಿಬೆಳಕು (ಸಾಂಸ್ಕತಿಕ ಬರಹಗಳು), ಆಫ್ರಿಕನ್ ಹಾಗೂ ಕನ್ನಡ ಸಾಹಿತ್ಯಗಳಲ್ಲಿ ಆಧುನಿಕತೆ ಮತ್ತು ಪರಂಪರೆ (ತೌಲನಿಕ ಅಧ್ಯಯನ), ಇಂತಿ ನಮಸ್ಕಾರಗಳು (ಲಂಕೇಶ್-ಡಿ.ಆರ್. ನಾಗರಾಜ್ ಕುರಿತ ...
READ MORE