‘ಷೇಕ್ಸ್ ಪಿಯರ್ ನ ಸಮಗ್ರ ನಾಟಕ ಕಥೆಗಳು’ ಎಲ್. ಎಸ್. ಶೇಷಗಿರಿರಾವ್ ಅವರು ಸಂಪಾದಿಸಿರುವ ಕತೆಗಳ ಸಂಕಲನ. ವಿಲಿಯಂ ಷೇಕ್ಸ್ ಪಿಯರ್ ಜಗತ್ತಿನ ಅತ್ಯಂತ ಶ್ರೇಷ್ಠ ನಾಟಕಕಾರರಲ್ಲಿ ಒಬ್ಬರು. ಆತನ ಪ್ರತಿಯೊಂದು ನಾಟಕದಲ್ಲಿಯೂ ಕುತೂಹಲವನ್ನು ಸೆರೆಹಿಡಿಯುವ ಕಥೆಗಳಿವೆ. ಈ ಕಥೆಗಳು ಆಸಕ್ತಿಯನ್ನು ಚಿಮ್ಮಿಸುತ್ತಾ ಸಾಗುವ ಘಟನೆಗಳ ಮಾಲೆಗಳ ಜೊತೆಗೆ ಜಟಿಲವಾದ ಮನುಷ್ಯ ಸ್ವಭಾವನ್ನು ತೆರೆದಿಡುತ್ತವೆ. ಅಂತಹ ಕತೆಗಳನ್ನು ಲೇಖಕರು ಕನ್ನಡಕ್ಕೆ ಅನುವಾದಿಸಿದ್ದಾರೆ.
ಇಂಗ್ಲಿಷ್ ಪ್ರಾಧ್ಯಾಪಕರಾಗಿದ್ದ ಎಲ್.ಎಸ್. ಶೇಷಗಿರಿರಾವ್ ಅವರು ಪ್ರಬುದ್ಧ ವಿಮರ್ಶಕರೆಂದೇ ಖ್ಯಾತರು. ತಂದೆ ಸ್ವಾಮಿರಾವ್- ತಾಯಿ ಕಮಲಾಬಾಯಿ. 1925ರ ಫೆಬ್ರುವರಿ 16ರಂದು ಜನಿಸಿದರು. ಬೆಂಗಳೂರು ಮೈಸೂರುಗಳಲ್ಲಿ ವಿದ್ಯಾಭ್ಯಾಸ ಮಾಡಿದ ಇವರು ನಾಗಪುರ ವಿ.ವಿ.ಯಲ್ಲಿ ಇಂಗ್ಲಿಷ್ ಎಂ.ಎ. ಪದವೀಧರರಾದರು. ಕಾಲೇಜು ಶಿಕ್ಷಣ ಇಲಾಖೆಗೆ ಸೇರಿ ಕೋಲಾರ, ಮಡಿಕೇರಿ, ಬೆಂಗಳೂರುಗಳಲ್ಲಿ ಕಾಲೇಜು ಅಧ್ಯಾಪಕರಾಗಿ ಕೊನೆಯಲ್ಲಿ ಕೆಲವುಕಾಲ ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದರು. 1947-50ರಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿಗಳಾಗಿ ಬಿ.ಎಂ.ಶ್ರೀ ಸ್ಮಾರಕ ಪ್ರತಿಷ್ಠಾನದ ಅಧ್ಯಕ್ಷರಾಗಿ ಕನ್ನಡ ಪುಸ್ತಕ ಪ್ರಾಧಿಕಾರದ ಪ್ರಥಮ ಅಧ್ಯಕ್ಷರಾಗಿ ಕೆಲಸ ಮಾಡಿದ್ದಾರೆ. ಕೇಂದ್ರ ಸಾಹಿತ್ಯ ಅಕಾಡೆಮಿ ...
READ MORE